ಕಂಟೈನರ್ ತುಂಬಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ: ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಬೆಂಗಳೂರು ಕಡೆಯಿಂದ ಕಂಟೈನರ್ ತುಂಬಿಕೊಂಡು ಬರುತ್ತಿದ್ದ ಲಾರಿ ಸಿದ್ದೇನಾಯಕನಹಳ್ಳಿ ಬಳಿ ಹಾದುಹೋಗಿರುವ ಹೆದ್ದಾರಿಯಲ್ಲಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಳವಡಿಸಿದ್ದ ತಡೆಗೋಡೆ ಮುರಿದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವಿದ್ಯುತ್ ತಂತಿ ತಗುಲಿ ಆಗಬಹುದಾಗಿದ್ದ ತೊಂದರೆಯಿಂದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

2 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

4 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

6 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

6 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

11 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

12 hours ago