ಹಿಂದೂಪುರ-ಯಲಹಂಕ ಹೆದ್ದಾರಿ ಮಾರ್ಗವಾಗಿ ಬೆಂಗಳೂರಿನ ಕಡೆಗೆ ಅಕ್ರಮವಾಗಿ ಕಂಟೈನರ್ ನಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 13 ಜಾನುವಾರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ…
ಘಾಟಿ ದನಗಳ ಜಾತ್ರೆ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು, ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತಾಲೂಕಿನಾದ್ಯಂತ ಗಸ್ತು ಕಾರ್ಯದಲ್ಲಿ ತೊಡಗಿರುತ್ತಾರೆ. ಈ ವೇಳೆ ಹಿಂದೂಪುರ-ಯಲಹಂಕ ಹೆದ್ದಾರಿ ಮಾರ್ಗದಲ್ಲಿ ಕಂಟೈನರ್ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಾಟ ಮಾಡುತ್ತಿರುವುದು ಪೊಲೀಸರ ಕಣ್ಣಿಗೆ ಬಿದ್ದಿದೆ… ಪೊಲೀಸರನ್ನು ನೋಡಿದ ಅಸಾಮಿಗಳು ಎಚ್ಚೆತ್ತು ಪೊಲೀಸರ ಕಣ್ಣುತಪ್ಪಿಸಿ ಎಸ್ಕೇಪ್ ಆಗಲು ಮುಂದಾಗುತ್ತಾರೆ. ಆದರೆ, ಪೊಲೀಸರು ಅಸಾಮಿಗಳ ಬೆಂಬಿಡದೇ ಕಂಟೈನರ್ ನಲ್ಲಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು 2 ಸೀಮೆ ಹಸುಗಳು, 5 ನಾಟಿ ಹಸುಗಳು ಹಾಗೂ 6 ಎತ್ತುಗಳು ಸೇರಿದಂತೆ 13 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ..
ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ ರೀತ್ಯಾ ಪ್ರಕರಣವನ್ನು ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…