ಎರಡು ವರ್ಷದ ಮುದ್ದಾದ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ ತಾಯಿಯೊಬ್ಬಳು ತಾನೂ ಕೂಡ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ, ಮಗಳು ವರ್ಷಿತಾ(2), ಇಬ್ಬರೂ ಸಾವಿನ ಮನೆ ಸೇರಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿಯಲಾಗಿದೆ ಎನ್ನಲಾಗಿದೆ.
ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ವಿಪರ್ಯಾಸ ಅಂದರೆ ಬೆಳಗಾಗೋದರಲ್ಲಿ ಎರಡೂ ಜೀವವೂ ಉಸಿರು ಚೆಲ್ಲಿವೆ.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದಳು ಅನ್ನೋ ಆರೋಪ ಕೇಳಿ ಬಂದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…