ಕಂದಾಯ ಇಲಾಖೆಯ ಬಾಕಿ‌ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಗಡುವು

5 ವರ್ಷಗಳಿಗಿಂತ ಹಳೆಯದಾದ 60‌ಸಾವಿರ ಪ್ರಕರಣಗಳ ಪೈಕಿ 30ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಜನವರಿಯೊಳಗೆ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಯಾವ ಕಡತ ಎಲ್ಲಿದೆ, ಯಾವ ಹಂತದಲ್ಲಿದೆ ಎಂಬ ಮಾಹಿತಿ ಇ-ಆಫೀಸ್‌ನಲ್ಲಿ ಬೆರಳ ತುದಿಯಲ್ಲಿ ಸಿಗಲಿದೆ. ನೂರರಷ್ಟು ಇ-ಆಫೀಸ್‌ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ನಿರೀಕ್ಷಕರ ಬಳಿ ಅರ್ಜಿಗಳು 15 ದಿನಗಳಿಗಿಂತ ಹೆಚ್ಚು ದಿನ ಉಳಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *