ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿಯನ್ನು ಗೂಗಲ್ ಫಾರ್ಮ್ ಲಿಂಕ್ https://docs.google.com/forms/d/e/1FAIpQLS_EphjQf06zNFLdaapM4JnBLenbByyWtv52n2V1rtlPLLRA/viewform?usp=sf_link ಬಳಸಿ ಸಲ್ಲಿಸಬಹುದು.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…