ಕಂಪ್ಯೂಟರ್‌ ಡಿಟಿಪಿ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರ್‌ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿಯನ್ನು ಗೂಗಲ್‌ ಫಾರ್ಮ್‌ ಲಿಂಕ್‌ https://docs.google.com/forms/d/e/1FAIpQLS_EphjQf06zNFLdaapM4JnBLenbByyWtv52n2V1rtlPLLRA/viewform?usp=sf_link ಬಳಸಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

20 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago