ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯು 2023ರ ಆಗಸ್ಟ್ 29 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಆಗಸ್ಟ್ 29 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…