ಕಂಪ್ಯೂಟರ್‌ ಡಿಟಿಪಿ ತರಬೇತಿ: ಆಗಸ್ಟ್‌ 29ರಂದು ನೇರ ಸಂದರ್ಶನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್‌ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯು 2023ರ ಆಗಸ್ಟ್‌ 29 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಆಗಸ್ಟ್‌ 29 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9241482541, 8884554510, 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

3 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

4 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

7 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

7 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

9 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

14 hours ago