ಕೋಲಾರ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ವಿತರಿಸುವ ಎಲೆಕ್ಟ್ರಾನಿಕ್ಸ್ ಕಿಟ್‌ಗಳನ್ನು ಸೋಮವಾರ ನಗರದ ತಮ್ಮ ಕಚೇರಿಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಸಾಂಕೇತಿಕವಾಗಿ ಫಲಾನುಭವಿಗಳಿಗೆ ವಿತರಿಸಿದರು,
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್,ನಗರಸಭೆ ಸದಸ್ಯ ಅಂಬರೀಶ್, ಕಾರ್ಮಿಕ ನಿರೀಕ್ಷಕಿ ರಾಜೇಶ್ವರಿ, ಗ್ರಾಪಂ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಛತ್ರಕೋಡಿಹಳ್ಳಿ ಮಂಜುನಾಥ್, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ರಾಮಯ್ಯ, ಮುಂತಾದವರು ಇದ್ದರು.