Categories: ಕೋಲಾರ

ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕಾರ್ಮಿಕ ಅಧಿಕಾರಿ ವರಲಕ್ಷ್ಮೀಗೆ ಮನವಿ

ಕೋಲಾರ: ಜಿಲ್ಲೆಗೆ ನೂತನವಾಗಿ ವರ್ಗಾವಣೆಯಾಗಿರುವ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರನ್ನು ಗುರುವಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ಕಷ್ಟಪಟ್ಟು ದುಡಿಯುತ್ತಾ ತಮ್ಮ ತಮ್ಮ ಕುಟುಂಬಗಳ ಪೋಷಣೆಯಲ್ಲಿ ತೊಡಗಿದ್ದಾರೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ಹಣದ ಸದ್ಬಳಕೆಗಾಗಿ ಕಾರ್ಮಿಕರು ಸಾಕಷ್ಟು ಅರ್ಜಿಗಳನ್ನು ಇಲಾಖೆಗೆ ಸಲ್ಲಿಸಿದ್ದಾರೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಕಾರ್ಮಿಕರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಇಲಾಖೆಯು ಕಟ್ಟಡ ಕಾರ್ಮಿಕರ ಪರವಾಗಿದೆ ಏನೇ ಸಮಸ್ಯೆಗಳು ಇದ್ದರೂ ಗಮನಕ್ಕೆ ತನ್ನಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುತ್ತದೆ ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಕಟ್ಟಡ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಐಟಿಯುಟಿಸಿ ಜಿಲ್ಲಾ ಅಧ್ಯಕ್ಷ ಪ್ರಭಾಕರ್, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ವೈ ಮುರಳೀಧರ್, ಮುಖಂಡರಾದ ಕೃಷ್ಣಮೂರ್ತಿ, ಮಾಲೂರು ರವಿಕುಮಾರ್, ಪವಿತ್ರ, ದೇವರಾಜ್, ಸುರೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

15 minutes ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

1 hour ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

11 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

15 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

23 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago