ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ(ಸಾಂಬಾರ್) ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರಿಯಮಂಗಲ ಗ್ರಾಮದ ಅರ್ಪದರಾಜು (59) ಬಂಧಿತ ಆರೋಪಿಯಾಗಿದ್ದು , ಅದೇ ಗ್ರಾಮದ ಜಾನು ಹಾಗೂ ಕರಿಯಪ್ಪ ಪರಾರಿಯಾಗಿರುವ ಆರೋಪಿಗಳಾಗಿದ್ದಾರೆ.
ಘಟನೆ ವಿವರ:
ಕಾವೇರಿ ಅಭಯಾರಣ್ಯದ ಕಂಪಾರ್ಟ್ ಮೆಂಟ್ 26 ರ ಹನೂರು ವನ್ಯಜೀವಿ ವಲಯದ ಶಾಗ್ಯಂ ಶಾಖೆಯ ಕಾರಯ್ಯನ ಬೆಟ್ಟ ಗಸ್ತಿನ ಬೂದಿಕುಂಟೆ ಕಾಲುದಾರಿ ಅರಣ್ಯ ಪ್ರದೇಶಕ್ಕೆ ಮೂವರು ವ್ಯಕ್ತಿಗಳು ಅತಿಕ್ರಮ ಪ್ರವೇಶ ಮಾಡಿ, ನಾಡ ಬಂದೂಕಿನ ಮೂಲಕ ಕಡವೆ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾವೇರಿ ವನ್ಯಜೀವಿಧಾಮದ ಡಿ ಸಿ ಎಫ್ ಸುರೇಂದ್ರ ಹಾಗೂ ಎಸಿಎಫ್ ಅಂಕರಾಜು ರವರ ಮಾರ್ಗದರ್ಶನದಲ್ಲಿ ಆರ್ ಎಫ್ ಓ ನಿರಂಜನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯ ವೇಳೆ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಇವರ ಬಂಧನಕ್ಕೆ ಈಗಾಗಲೇ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತನಿಂದ ನಾಡ ಬಂದೂಕು, ನೂರು ಕೆಜಿ ಕಡವೆಯ ಹಸಿಮಾಂಸ, ಕಬ್ಬಿಣದ ಚಾಕು, ಮದ್ದು ತುಂಬಿದ ಪ್ಲಾಸ್ಟಿಕ್ ಚೀಲ, ಕಬ್ಬಿಣದ ಗುಂಡು, ಕಬ್ಬಿಣದ ಮೊಳೆ, ಕಬ್ಬಿಣದ ಬಾಲ್ಸ್ ತುಂಬಿದ ಪ್ಲಾಸ್ಟಿಕ್ ಡಬ್ಬಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀನಿ ಆನಂದ್ ಗಸ್ತು ವನಪಾಲಕರಾದ ಯಲಗೂರಪ್ಪ ಗುಬ್ಬಿ ಶಿವಲಿಂಗಪ್ಪ, ಎಪಿ ಕ್ಯಾಂಪ್ ನ ಸಿಬ್ಬಂದಿ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…