ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಇಂದು ಮುಂಜಾನೆ ನಡೆದಿದೆ.
ದೊಡ್ಡಬಳ್ಳಾಪುರದಿಂದ ಹೊಸಹಳ್ಳಿ ಕಡೆಗೆ ಸಿಮೆಂಟ್ ಮೂಟೆಗಳನ್ನು ಹೊತ್ತು ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಕಡಿದಾದ ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಸಿಮೆಂಟ್ ಮೂಟೆಗಳೆಲ್ಲವೂ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ದೇವನಹಳ್ಳಿ ಮೂಲದ ಮಧು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಹೊಸಹಳ್ಳಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ದೊಡ್ಡಬಳ್ಳಾಪುರ: ಕರ್ತವ್ಯ ನಿರತ ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೊಲೀಸ್ ಸಮವಸ್ತ್ರಕ್ಕೆ ಕೈಹಾಕಿ ತಳ್ಳಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ದೊಡ್ಡಬಳ್ಳಾಪುರ: ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ನಡು ರಸ್ತೆಯಲ್ಲೇ ಸಮವಸ್ತ್ರ ಹರಿದು ದರ್ಪ ಮೆರೆದಿರುವ…
ದೊಡ್ಡಬಳ್ಳಾಪುರ: ಮುಂದಿನ ಐದು ವರ್ಷಗಳ ಅವಧಿಗೆ ನಡೆಯಲಿರುವ ತಾಲ್ಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯ…
ದೊಡ್ಡಬಳ್ಳಾಪುರ: ಮುಂಬರುವ ಐದು ವರ್ಷಗಳ ಅವಧಿಗೆ ನಡೆಯಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 28…
ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಉತ್ತರಿಸಲಿ. ಕರ್ನಾಟಕದ ಜನರನ್ನು ದಿಕ್ಕುತಪ್ಪಿಸುವ ರಾಜಕೀಯವನ್ನು ನಿಲ್ಲಿಸಲಿ ಎಂದು…
ಕೇಂದ್ರ ಸರ್ಕಾರವು ಮೊಬೈಲ್ ಮೂಲಕ ರೈತರು ಎಲ್ಲಾ ರಸಗೊಬ್ಬರಗಳನ್ನು ಮುಂಗಡವಾಗಿ ಕಾಯ್ದಿರಿಸಿ ಖರೀದಿಸುವ ನೂತನ " ಫರ್ಟಿಲೈಸರ್ ಸೇಲ್ ಅಪಿಕೇಶನ್…