ಕಡಿಮೆ ಖರ್ಚು, ಕಡಿಮೆ ಅವಧಿಯಲ್ಲಿ ಶೀಘ್ರ ನ್ಯಾಯ ಪಡೆದುಕೊಳ್ಳಲು ವಿಶೇಷ ಮಧ್ಯಸ್ಥಿಕೆ ಅಭಿಯಾನ ಸದುಪಯೋಗಪಡಿಸಿಕೊಳ್ಳಿ- ಪ್ರಧಾನ ಸಿವಿಲ್ ನ್ಯಾಯಾಲಯ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಕಾರದ ವತಿಯಿಂದ  ಜುಲೈ 1 ರಿಂದ ಅಕ್ಟೋಬರ್ 7ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರಕರಣದ ಶೀಘ್ರ ಇತ್ಯರ್ಥ ಇಬ್ಬರು ಪಕ್ಷದಾರರೂ ಸಹ ಗೆಲುವಿನ ಸಮಾಧಾನ ಪಡೆದುಕೊಳ್ಳುವಲ್ಲಿ ಈ ಅಭಿಯಾನ ನೆರವಾಗಲಿದ್ದು, ಪಕ್ಷಗಾರರು ಈ ಅಭಿಯಾನದ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಕಾರದ ತಾಲೂಕು ಸದಸ್ಯ ಕಾರ್ಯದರ್ಶಿ ದಾಸರಿ ಕ್ರಾಂತಿ ಕಿರಣ್ ಅವರು ತಿಳಿಸಿದರು.

ನಗರದ ನ್ಯಾಯಾಲಯ ಆವರಣದಲ್ಲಿರುವ ತಾಲೂಕು ವಕೀಲರ ಸಂಘದ ಕಾರ್ಯಾಲಯ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಧ್ಯಸ್ಥಿಕೆಯು ನ್ಯಾಯಾಲಯಗಳಲ್ಲಿ ನಡೆಯುವ ಪ್ರಕ್ರಿಯೆಗಳಿಗಿಂತ ಭಿನ್ನವಾಗಿರಲಿದೆ. ಸಾಮಾನ್ಯವಾಗಿ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣಗಳಲ್ಲಿ ವಕೀಲರು ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷಿಗಳು, ದಾಖಲೆಗಲನ್ನು ಪರಿಗಣಿಸಲಾಗುತ್ತದೆ. ಆದರೆ, ಮಧ್ಯಸ್ಥಿಕೆ ಅಭಿಯಾನದಲ್ಲಿ ಪ್ರಕರಣಕ್ಕೆ ಸಂಬಂಧಪಡದ, ಕಾನೂನು ಸೇವೆಗಳ ಪ್ರಾಧಿಕಾರದಿಂದ ತರಬೇತಿ ಪಡೆದ ಅಕೃತ ವ್ಯಕ್ತಿಯು ಮಧ್ಯಸ್ಥಿಕೆ ವಹಿಸಲಿದ್ದು, ಇವರು, ಕಾನೂನು ಹಾಗೂ  ಪ್ರಕರಣಗಳ ವಿಚಾರದಲ್ಲಿ ಪರಿಣಿತಿ ಹೊಂದಿರುತ್ತಾರೆ. ಅವರು ಪಕ್ಷದಾರರ ಮಧ್ಯಸ್ಥಿಕೆ ಮಾಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಪ್ರಕರಣ ಇತ್ಯರ್ಥಗೊಳಿಸಲು ಸೂಚಿಸುತ್ತಾರೆ. 60 ದಿನಗಳ ಕಾಲಾವಕಾಶದಲ್ಲಿ ಇಬ್ಬರೂ ಪಕ್ಷಗಾರರು ಒಪ್ಪಿದ್ದಲ್ಲಿ ಈ ಪ್ರಕರಣ ಸುಲಭವಾಗಿ ಇತ್ಯರ್ಥವಾಗಿ, ಶೀಘ್ರ ನ್ಯಾಯ ದೊರೆಯುತ್ತದೆ. ಕಡಿಮೆ ಅವಧಿ, ಕಡಿಮೆ ಖರ್ಚಿನಲ್ಲಿ ನ್ಯಾಯ ದೊರೆಯಲಿದ್ದು, ಇಬ್ಬರೂ ಪಕ್ಷಗಾರರು ಗೆಲ್ಲುವ ಅವಕಾಶವಿದೆ ಎಂದರು.

 ಮಧ್ಯಸ್ಥಿಕೆದಾರನು ವಿವಾದವಿರುವ ಇಬ್ಬರು ಪಕ್ಷಗಾರರ ಮೇಲೆ ತನ್ನ ನಿರ್ಧಾರವನ್ನು ಹೇರುವುದಿಲ್ಲ ಮತ್ತು ನಿರ್ಧಾರವನ್ನು ಒಪ್ಪಿಕೊಳ್ಳುವಂತೆ ಒತ್ತಾಯಪಡಿಸುವುದಿಲ್ಲ.  ಮಧ್ಯಸ್ಥಿಕೆದಾರನು ಇಬ್ಬರು ಪಕ್ಷಗಾರರ ಒಮ್ಮತದ ನಿರ್ಧಾರವನ್ನು ಒಪ್ಪಂದ ಪತ್ರದಲ್ಲಿ ನಮೂದಿಸಿ, ಅದರ ಮೇಲೆ ಇಬ್ಬರು ಪಕ್ಷಗಾರರ ಸಹಿಗಳನ್ನು ಪಡೆದು ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ಒಪ್ಪಂದ ಪತ್ರದಲ್ಲಿರುವ ಷರತ್ತುಗಳು ಕಾನೂನಿಗೆ ಪೂರಕವಾಗಿದ್ದರೆ ನ್ಯಾಯಾಲಯ ಒಪ್ಪಂದ ಪತ್ರವನ್ನು ಅಂಗೀಕರಿಸಿ ತೀರ್ಪನ್ನು ನೀಡುತ್ತದೆ. ಒಪ್ಪಂದ ಪತ್ರದಲ್ಲಿರುವ ಯಾವುದೇ ಅಂಶ ಕಾನೂನಿಗೆ ವಿರುದ್ಧವಾಗಿದ್ದರೆ ಅಥವಾ ಪಕ್ಷಗಾರರ ಗಮನಕ್ಕೆ ತರದೇ ತಯಾರಿಸಿದ್ದರೆ ನ್ಯಾಯಾಲಯ ಅಂತಹ ಒಪ್ಪಂದ ಪತ್ರವನ್ನು ತಿರಸ್ಕರಿಸಬಹುದು. ನ್ಯಾಯಾಲಯದಲ್ಲಿರುವ ಬಾಕಿ ಇರುವ ಪ್ರಕರಣವನ್ನು ಯಾವುದೇ ಹಂತದಲ್ಲಿ ಮಧ್ಯಸ್ಥಿಕೆಗೆ ಕಳುಹಿಸಬಹುದು. ಇಬ್ಬರು ಪಕ್ಷಗಾರರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುತ್ತದೆ. ಪರಸ್ಪರ ಸಂವಹನದ ಮೂಲಕ ಪೂರಕ ವಾತವರಣವನ್ನು ನಿರ್ಮಿಸಿ ಅತಿ ಶೀಘ್ರವಾಗಿ ಹಾಗೂ ಅಂತಿಮ ಪ್ರಕರಣವನ್ನು ಸಂವಹನದ ಮೂಲಕ ಇತ್ಯರ್ಥಗೊಳಿಸಲು ಮಧ್ಯಸ್ಥಿಕೆ ಪ್ರಕ್ರಿಯೆ ಒಂದು ಸುವರ್ಣ ಅವಕಾಶವಾಗಿದೆ ಎಂದರು.

ಮಧ್ಯಸ್ಥಿಕೆಗೆ ಒಳಪಡುವ ಪ್ರಕರಣಗಳು: 

ವೈವಾಹಿಕ ಪ್ರಕರಣಗಳು, ಕೌಟಂಬಿಕ ದೌರ್ಜನ್ಯದ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು, ನೌಕರರ ಸೇವಾ ವಿಷಯಕ್ಕೆ ಸಂಬಂಧಿಸಿದ ಪ್ರಕರಣಗಳು, ರಾಜಿ ಆಗಬಹುದಾದಂತಹ ಅಪರಾಧ ಪ್ರಕರಣಗಳು, ಗ್ರಾಹಕರ ಪರಿಹಾರದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಕರಣದ ಪ್ರಕರಣಗಳು, ಪಾಲು ವಿಭಾಗ ಪ್ರಕರಣಗಳು, ಮನೆ ಬಾಡಿಗೆ ಅಥವಾ ಬಾಡಿಗೆದಾರನನ್ನು ಹೊರಹಾಕುವಿಕೆಗೆ ಸಂಬಂಧಿಸಿದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಇತರೆ ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ತಾಲೂಕಿನಲ್ಲಿ ಈವರೆಗೆ 43 ಪ್ರಕರಣಗಳು ವಿಶೇಷ ಮಧ್ಯಸ್ಥಿಕೆ ಮೂಲಕ ಬಂದಿದ್ದು, ಈವರೆಗೆ 15 ಪ್ರಕರಣಗಳು ಇತ್ಯರ್ಥವಾಗಿವೆ ಎಂದರು.

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ ಮಾತನಾಡಿ, ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವದಲ್ಲಿ ನಮ್ಮ ಹಕ್ಕು ಬಾಧ್ಯತೆಗಳ ಉಳಿವಿಗಾಗಿ ಕಾನೂನು ಸೇವೆಗಳ ಪ್ರಾಕಾರ ಕಾನೂನು ಸೇವೆಗಳನ್ನು ನೀಡುತ್ತಿದೆ. ಈ ದಿಸೆಯಲ್ಲಿ ವಿಶೇಷ ಮಧ್ಯಸ್ಥಿಕೆ ಅಭಿಯಾನ ರಾಷ್ಟ್ರವ್ಯಾಪ್ತಿ ನಡೆಯುತ್ತಿದೆ. ನ್ಯಾಯಾಲಯದಲ್ಲಿ ವಕೀಲರಂತೆ ಪ್ರಜೆಗಳ ಪಾತ್ರವೂ ಮುಖ್ಯವಾಗಿದೆ. ಅಭಿಯಾನದ ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.

ಸುದ್ಧಿಗೋಷ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಜಂಟಿ ಕಾರ್ಯದರ್ಶಿ ವಿಜಯಕುಮಾರ್, ಖಜಾಂಚಿ ಎಂ.ಮುನಿರಾಜು ಹಾಗೂ ಪದಾಕಾರಿಗಳು ಇದ್ದರು.

Ramesh Babu

Journalist

View Comments

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

8 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

9 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

13 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

14 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

20 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

20 hours ago