ಈ ವರ್ಷ ಕಡಿಮೆ ಮಳೆಯಾಗಿ ಬರಗಾಲದ ಛಾಯೆ ಇರುವದರಿಂದ ಅರಣ್ಯದೊಳಗಿನ ಪ್ರಾಣಿ-ಪಕ್ಷಿಗಳಿಗೆ ವನ್ಯಜೀವಿಗಳಿಗೆ ನೀರಿನ ಕೊರತೆ ಆಗದಂತೆ ನೀರುಗುಂಡಿ (ವಾಟರ್ ಹೋಲ್)ಗಳಿಗೆ ಜಲಪೂರಣ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ್ದ ಸೂಚನೆಯಂತೆ, ಅರಣ್ಯ ಇಲಾಖೆ ಕೆರೆ, ಕಟ್ಟೆಗೆ ನೀರು ತುಂಬಿಸುವ ಕಾರ್ಯ ಆರಂಭಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಈಶ್ವರ್ ಖಂಡ್ರೆ, ಬಂಡೀಪುರ ರಕ್ಷಿತ ಅರಣ್ಯಕ್ಕೆ ಇತ್ತೀಚೆಗೆ ನಾನು ಭೇಟಿ ನೀಡಿದ್ದಾಗ, ಮಳೆಯ ಕೊರತೆಯಿಂದ ಬೇಸಿಗೆ ಪೂರ್ವದಲ್ಲೇ ಬಿರುಬಿಸಿಲು ಕಾಣಿಸಿಕೊಂಡಿದ್ದು, ನೀರಿಲ್ಲದೆ ಬರಿದಾಗುತ್ತಿರುವ ಜಲಗುಂಡಿಗಳನ್ನು ಕಂಡು ಕಳವಳ ವ್ಯಕ್ತಪಡಿಸಿದ್ದೆ. ಇದರಿಂದ ನೀರು ಅರಸಿ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುವ ಕಾರಣ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುವ ಅಪಾಯವಿದ್ದು, ತಕ್ಷಣವೇ ರಾಜ್ಯದಾದ್ಯಂತ ಕಾನನದೊಳಗಿರುವ ಜಲ ಗುಂಡಿಗಳಿಗೆ ಮರುಪೂರಣ ಮಾಡಿ ಜಿಪಿಎಸ್ ವಿಡಿಯೋ ಮತ್ತು ಚಿತ್ರ ಕಳುಹಿಸುವಂತೆ ಸೂಚನೆ ನೀಡಿದ್ದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿರುವ ವಲಯ ಅರಣ್ಯಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಮುಖ್ಯ ಅರಣ್ಯ ಸಂರಕ್ಷಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಅರಣ್ಯದೊಳಗಿನ ಕೆರೆ, ಕಟ್ಟೆ ಸೇರಿದಂತೆ ಎಲ್ಲ ಜಲಗುಂಡಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿದ ಕೊಳವೆ ಬಾವಿಗಳಿಂದ ಮತ್ತು ಟ್ಯಾಂಕರ್ ಮೂಲಕ ನೀರು ಹಾಯಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಅರಣ್ಯದೊಳಗೆ ನಿಯಮಾನುಸಾರ ಅವಕಾಶ ಇರುವ ಕಡೆ ಕೊಳವೆ ಬಾವಿ ಕೊರೆಸಿ, ಸೌರ ಪಂಪ್ ಸೆಟ್ ಅಳವಡಿಸಿ ಅದಕ್ಕೆ ಆನೆ ದಾಳಿ ಮಾಡದಂತೆ ರೈಲ್ವೆ ಬ್ಯಾರಿಕೇಡ್ ಹಾಕಲು ಅಥವಾ ಇತರ ಯಾವುದೇ ಮೂಲಗಳಿಂದ ನೀರು ಹಾಯಿಸಲು ಮತ್ತು ಮೃಗಾಲಯಗಳಲ್ಲಿನ ಗುಂಡಿಗಳಿಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲು ಸೂಚನೆ ನೀಡಿದ್ದೇನೆ ಎಂದರು.
ಒಟ್ಟಾರೆಯಾಗಿ ಮಳೆಗಾಲ ಆರಂಭವಾಗುವವರೆಗೆ ವನ್ಯಜೀವಿಗಳು ನೀರು ಹುಡುಕಿಕೊಂಡು ಅರಣ್ಯದಿಂದ ನಾಡಿಗೆ ಬಾರದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದೇನೆ ಎಂದು ಹೇಳಿದರು.
ಅದೇರೀತಿ ಪ್ರಾಣಿ ಪ್ರಿಯರು ನೀರಿನ ತೊಟ್ಟಿಗಳಿಗೆ ನೀರು ತುಂಬಿಸಿ ಪ್ರಾಣಿಗಳ ದಾಹ ತೀರಿಸುತ್ತಿರುವುದು ಶ್ಲಾಘನೀಯ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…