ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.
ಎಂಟು ತಿಂಗಳ ಹಿಂದೆ ಗುಜರಾತ್‌ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು 5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.
ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?
ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್, ಸೋಪ್, ಫೇಸ್‌ವಾಷ್, ಸ್ಕಿನ್ ಕ್ರೀಮ್ ಕೂಡಾ ತಯಾರಿಸಲಾಗುತ್ತದೆ.
ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ ಇದೆ.
ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್‌ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…