Categories: ಆರೋಗ್ಯ

ಕತ್ತೆ ಹಾಲು ನಿಜವಾಗಿಯೂ ಪ್ರಯೋಜನಕಾರಿಯೇ? ಇದು ಚಿಕಿತ್ಸಕ ಗುಣಗಳನ್ನು ಹೊಂದಿದೆಯೇ? ಇಲ್ಲಿದೆ ಮಾಹಿತಿ ಓದಿ..

ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.

ಎಂಟು ತಿಂಗಳ ಹಿಂದೆ ಗುಜರಾತ್‌ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು  5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.

ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?

ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್‌, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್‌, ಸೋಪ್‌, ಫೇಸ್‌ವಾಷ್‌, ಸ್ಕಿನ್‌ ಕ್ರೀಮ್‌ ಕೂಡಾ ತಯಾರಿಸಲಾಗುತ್ತದೆ.

ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ‌ ಇದೆ.

ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್‌ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

5 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

18 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

19 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

21 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

22 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

24 hours ago