ಕದ್ದ ಚಿನ್ನ ಖರೀದಿ ಪ್ರಕರಣ: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನ ವಶಕ್ಕೆ ಪಡೆದ ಪೊಲೀಸರು

ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರು ಕಳ್ಳರಿಂದ ಕಳ್ಳತನ ಮಾಡಿದ ಚಿನ್ನ ಖರೀದಿ ಆರೋಪದಲ್ಲಿ ಬೊಮ್ಮನಹಳ್ಳಿ ಬಾಬು ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಲಾಗುತ್ತಿದೆ.

ಕಳೆದ ಎರಡು ತಿಂಗಳ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ಬಾಬು ಅವರನ್ನು ಬಂಧಿಸಿದ್ದಾರೆ‌.
ಇಂದು ಮುಂಜಾನೆ ತುಮಕೂರು ಜಿಲ್ಲಾ ಕಾರಾಗೃಹ ದಿಂದ ಜಾಮೀನಿನ ಮೇಲೆ ಹೊರಬಂದ ಬೊಮ್ಮನಹಳ್ಳಿ ಬಾಬು ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡ ಹೊಗಲಾಗಿದೆ.

2016 ರಲ್ಲಿ ನಾನು ಅಟಿಕಾ ಗೋಲ್ಡ್ ಕಂಪನಿಗೆ ರಾಜೀನಾಮೆ ಮಾಡಿದ್ದೇನೆ. ನ್ಯಾಯಾಲಯ ನಿನ್ನೆಯೂ ಕೂಡ ಒಂದು ಕೇಸ್ ನಲ್ಲಿ ಅಟಿಕಾ ಗೊಲ್ಡ್ ಗೆ ಬಾಬು ನ ಭಾಗಿ ಮಾಡಬೇಡಿ ಎಂದು ಆದೇಶ ಮಾಡಿದೆ. ಆದರೂ, ವಿನಾಕಾರಣ ಪೊಲೀಸರು ನನ್ನನ್ನ ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡ್ತಿದ್ದಾರೆ ಪೊಲೀಸ್ ಠಾಣೆ ಮುಂದೆ ಅಟಿಕಾ ಗೊಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಹೇಳಿಕೆ ನೀಡಿದ್ದಾರೆ.

ಕೆಲ ಕೇಸ್ ಗಳಲ್ಲಿ ನಾನು ತಡೆಯಾಜ್ಞೆ ತಂದಿದ್ದೇನೆ. ಆದರೂ, ನನ್ನನ್ನು ವಿನಾಕಾರಣ ಕೇಸ್ ಗಳಲ್ಲಿ ಸಿಕ್ಕಿಸೋ ಸಂಚು ನಡೆಯುತ್ತಿದೆ. ಇದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago