ಕನಕದಾಸ‌ನಗರದಲ್ಲಿ ವಿಜೃಂಭಣೆಯ ಪಂಚ ಮಾತೆಯರ ಉತ್ಸವ

ಶ್ರೀ ಮುತ್ಯಾಲಮ್ಮ ಸೇವಾ ಸಮಿತಿ‌ ಮತ್ತು ನವಜ್ಯೋತಿ ಕಲಾ ಸಂಘದ ವತಿಯಿಂದ ದೊಡ್ಡಬಳ್ಳಾಪುರ ನಗರದ ಕನಕದಾಸ ರಸ್ತೆಯ ಕನಕದಾಸ‌ನಗರದಲ್ಲಿ ಪಂಚ ಮಾತೆಯರ ಉತ್ಸವ ವಿಜೃಂಭಣೆಯಿಂದ ಜರುಗಿತು.

ಮುತ್ಯಾಲಮ್ಮ, ದೊಡ್ಡಮ್ಮದೇವಿ, ಲಕ್ಷ್ಮಿದೇವಿ, ದೇವನಹಳ್ಳಿ‌ ಶ್ರೀ ಚೌಡೇಶ್ವರಿ ದೇವಿ, ಕಲ್ಲುಪೇಟೆ ಮಾರಮ್ಮದೇವಿಯವರ ಉತ್ಸವ ಮೂರ್ತಿಗಳಿಗೆ ವಿವಿಧ ಪುಷ್ಪಗಳ ಹೂವಿನ ಅಲಂಕಾರ, ದೀಪಾಲಂಕಾರ, ವಿವಿಧ ಹೋಮ, ಪೂಜೆ ಪುನಸ್ಕಾರ ಅದ್ಧೂರಿಯಾಗಿ ನೆರವೇರಿಸಲಾಯಿತು.

ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಪಂಚ ಮಾತೆಯರ ದರ್ಶನ ಪಡೆದು ಪುನೀತರಾದರು. ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು.

ಈ ವೇಳೆ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

ಈ ವೇಳೆ ಉದಯ್, ಶ್ರೇಯಸ್, ಭರತ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

5 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

6 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

10 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

11 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

17 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

18 hours ago