ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು-ಜಿ.ಎಂ.ನಾಗರಾಜು

ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ  ಅಳವಡಿಸಿಕೊಳ್ಳುವ ಉಪದೇಶಗಳನ್ನು ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನಕದಾಸರು ಮೂಲತಃ ಬಾಡ ಪ್ರಾಂತ್ಯದ  ದಂಡನಾಯಕರಾಗಿದ್ದರು. ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತರಾದರು. ಹರಿದಾಸ ಸಾಹಿತ್ಯಕ್ಕೆ ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಉತ್ತಮ‌ ಕಾವ್ಯ ಕೃತಿಗಳನ್ನು  ಕನಕದಾಸರು ನೀಡಿದ್ದಾರೆ ಎಂದರು.

ಕನಕದಾಸರು ಸರಳ ಭಾಷೆಯಲ್ಲಿ ಕೀರ್ತನೆಗಳನ್ನು ಮತ್ತು ಕಾವ್ಯಗಳನ್ನು ರಚಿಸುವ ಮೂಲಕ ಕನ್ನಡತನ ಎತ್ತಿ ಹಿಡಿದರು. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದೆ. ಕನಕದಾಸರು ತಮ್ಮ ಕೀರ್ತನೆಗಳ  ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು .  ‘ಕುಲ ಕುಲವೆಂದು ಹೊಡೆದಾಡದಿರಿ… ಮುಂತಾದ  ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆಯ ನ್ಯೂನತೆಯನ್ನು ಹೋಗಲಾಡಿಸಬೇಕೆಂದರು.

ಕನಕದಾಸರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಸಮಾಜದ ಪರಿವರ್ತನೆ ಕನಕದಾಸರ ಸಾಹಿತ್ಯದ ಪ್ರಮುಖ ಆಶಯವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್ ಮಾತನಾಡಿ, ಸಾಮಾಜಿಕ ಪ್ರಜ್ಞೆಯ ವಿಕಸನಕ್ಕೆ ಬೇಕಾದ ಮಾರ್ಗಗಳು ಕನಕದಾಸರ   ಸಾಹಿತ್ಯದಲ್ಲಿ ಇವೆ. ಆದ್ದರಿಂದ ಅವರ ಸಾಹಿತ್ಯ ವೈಚಾರಿಕ ಪ್ರಬುದ್ಧತೆಯಿಂದ ಕೂಡಿದೆ. ಪ್ರತಿಯೊಂದು ಕೃತಿಯಲ್ಲಿಯೂ  ಕನಕದಾಸರು ಕವಿತ್ವ-ಕಲ್ಪನೆಗಳ ಜೊತೆಗೆ ವಾಸ್ತವ ನಿಲುವುಗಳನ್ನು   ಪ್ರತಿಪಾದಿಸಿದ್ದಾರೆ. ಕನಕದಾಸರು ತಮ್ಮ ವೈಚಾರಿಕ ಮತ್ತು ಪ್ರತಿಭಟನಾ ನೆಲೆಗಟ್ಟಿನಿಂದ ದಾಸಸಾಹಿತ್ಯಕ್ಕೆ, ತನ್ಮೂಲಕ ಕನ್ನಡ ಸಾಹಿತ್ಯಕ್ಕೆ ವೈಚಾರಿಕ ಪ್ರಭೆಯನ್ನು ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ದೊಡ್ಡಬಳ್ಳಾಪುರ ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜು ಶಿರವಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿನಿಧಿಗಳಾದ ನಾಗರತ್ನಮ್ಮ, ಸಫೀರ್, ಶ್ರೀನಿವಾಸ್ ಮುಂತಾದವರು ಭಾಗ ವಹಿಸಿದ್ದರು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

7 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

8 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

12 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

13 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

18 hours ago