ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 19 ಸದಸ್ಯರಿರುವ ಕನಸವಾಡಿ ಗ್ರಾಮ ಪಂಚಾಯ್ತಿಯಲ್ಲಿ ನೂತನ ಅಧ್ಯಕ್ಷರಾಗಿ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷರಾಗಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸೌಭಾಗ್ಯ ಉಮಾಶಂಕರ್ ಕೆ.ಸಿ, ಉಪಾಧ್ಯಕ್ಷ ಸ್ಥಾನಕ್ಕೆ ರಾಜಣ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳು ಅಗತ್ಯ ಬಹುಮತ ವೀಕ್ಷಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನೂತನ ಅಧ್ಯಕ್ಷ ಸೌಭಾಗ್ಯ ಉಮಾಶಂಕರ್ ಕೆ.ಸಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ. ಮೊದಲು ಆದತ್ಯೆ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಹೇಳಿದರು.
ನಂತರ ಉಪಾಧ್ಯಕ್ಷ ರಾಜಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷರು ಹಾಗೂ ವಿಎಸ್ ಎಸ್ ಎನ್ ಉಪಾಧ್ಯಕ್ಷರಾದ ಮಂಜುನಾಥ್. ಟಿ, ಸದಸ್ಯರುಗಳಾದ ಟಿ.ವಿಜಿಕುಮಾರ್, ಪ್ರಭಾಕರ್, ಸುರೇಶ್, ರೇಣುಕಮ್ಮ, ರಮೇಶ್, ಶೋಭಾ, ಕೃಷ್ಣಮೂರ್ತಿ, ಶೋಭಶಂಕರ್, ಆಶಾ ನಾಗರಾಜು, K. B ಶ್ರೀನಿವಾಸ್, ರಂಗನಾಥ್, ಮಮತಾ, ಶಾಂತಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…