2025-26 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಾಲ್‌ಗೆ ₹4,886 ರಂತೆ ಖರೀದಿಸಲಾಗುತ್ತಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಗಿ ಬೆಳೆಗಾರರು ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ.
ಕ್ಷೇತ್ರದ ರೈತರು ಎಪಿಎಂಸಿಯ ಯಾರ್ಡ್‌ನ ರೈತ ಭವನ ಕೇಂದ್ರದಲ್ಲಿ ಮತ್ತು ಸಾಸಲು ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಫ್ರೂಟ್ಸ್ ಗುರುತಿನ ಸಂಖ್ಯೆಯ ಜೊತೆಗೆ ಆಧಾರ್ ಕಾರ್ಡ್ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಸಬಹುದು ಎಂದು ಹೇಳಿದ್ದಾರೆ.
ನೋಂದಣಿಯು 12 ಡಿಸೆಂಬರ್ 2025 ರ ವರೆಗೆ ನಡೆಯಲಿದ್ದು, ಖರೀದಿ ಕಾರ್ಯವು 1 ಜನವರಿ 2026 ರಿಂದ ಪ್ರಾರಂಭಗೊಂಡು 31 ಮಾರ್ಚ್ 2026 ರ ವರೆಗೆ ನಡೆಯಲಿದೆ ಎಂದರು.
ಕಳೆದ 2 ವರ್ಷಗಳಿಂದ ಇಡೀ ರಾಜ್ಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಅತಿ ಹೆಚ್ಚು ರಾಗಿ ನೀಡಿದೆ. ಕೇಂದ್ರ ಸರ್ಕಾರ ಈ ಬಾರಿಯೂ ಉತ್ತಮ ಬೆಲೆ ನಿಗದಿಪಡಿಸಿದ್ದು, ಕ್ಷೇತ್ರದ ರೈತರು ನೋಂದಣಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರುತ್ತೇನೆ ಎಂದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…