ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು ಈ ಕೆಳಕಂಡಂತಿವೆ ನೋಡಿ…..

– ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇರುತ್ತದೆ. ಇದರ ಪೈಕಿ ಶೇಕಡಾ 84% ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ.

– ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ನಿರ್ಮಾಣ ಕಾಮಗಾರಿಗಳಿಗೆ ರೂ.2,581.67 ಕೋಟಿ,  ಭೂಸ್ವಾಧೀನ ಪ್ರಕ್ರಿಯೆಗೆ ರೂ. 2950.22 ಕೋಟಿ ಬಿಡುಗಡೆ ಮಾಡಲಾಗಿದೆ.

– ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ.  ಹಾಸನ ವಿಮಾನ ನಿಲ್ದಾಣ ಭೂ ಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು.

– ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ ಮಾಡಿದ್ದು, ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ. ಒಟ್ಟು 93,782 ಮೆಟ್ರಿಕ್‌ ಟನ್‌ ಮೆಕ್ಕೆಜೋಳ ಖರೀದಿಗೆ ಇಂಡೆಂಟ್‌ ಪಡೆಯಲಾಗಿದ್ದು, ನಿಗದಿತ ಪ್ರಮಾಣದ ಮೆಕ್ಕೆಜೋಳ ಖರೀದಿಗೆ ಕ್ರಮ ಕೈಗೊಳ್ಳಬೇಕು.

– ಎಥೆನಾಲ್ ಖರೀದಿ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಮಾಡಿದ್ದ ಮನವಿಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಇಂಡೆಂಟ್‌ ನಿಗದಿಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು.

– 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3,510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು.

ಇದರಲ್ಲಿ ಈಗಾಗಲೇ ರೂ. 2,040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ.

ಇನ್ನೂ ರೂ. 1,205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ.

ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು.

– 2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ ರೂ.1,890 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರೂ.250 ಕೋಟಿ ಬಿಡುಗಡೆ ಮಾಡಲಾಗಿದೆ.

– ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ರೂ. 8,666.50 ಕೋಟಿ ಅನುಮೋದನೆ ನೀಡಲಾಗಿದ್ದು, ಈಗಾಗಲೇ ರೂ.1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ.

– ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿಯಾಗಿದೆ.

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮಾಡಬೇಕು.

– 2024-25 ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು ರೂ. 8,666.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.

ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜನವರಿ 10ರೊಳಗಾಗಿ ಪೂರ್ಣಗೊಳಿಸಬೇಕು.

– ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು.

ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಿಳಿಸಿದರು..

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

3 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

16 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

18 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

18 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

20 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago