ಕೇಂದ್ರ ಸರ್ಕಾರವು 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 3,578 ರೂ. ದರದಲ್ಲಿ ರಾಗಿ ಖರೀದಿಸಲು ಆದೇಶಿಸಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ಸಂಬಧಿಸಿದಂತೆ ರೈತರ ನೋಂದಣಿ ಕಾರ್ಯ ಪ್ರಾರಂಭವಾಗಲಿದೆ. ಜನವರಿ 1 ರಿಂದ ಜಿಲ್ಲೆಯ ಐದು ಸ್ಥಳಗಳಲ್ಲಿ ರಾಗಿ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕುರಿತ ಕಾರ್ಯಪಡೆಯ ಮೊದಲನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದಾದ್ಯಂತ 5 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಗುರಿ ನಿಗದಿಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ತಲಾ ಒಂದು ಹಾಗೂ ದೊಡ್ಡಬಳ್ಳಾಪುರದ ಸಾಸಲು ಹೋಬಳಿಯಲ್ಲಿ ಒಂದು ಹೆಚ್ಚುವರಿ ಸಂಗ್ರಹಣಾ ಕೇಂದ್ರ ಸೇರಿ ಒಟ್ಟು 5 ರಾಗಿ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲಾಗುವುದು. ಅಗತ್ಯ ಬಿದ್ದರೆ ಖರೀದಿ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುವುದು. ಪ್ರತಿ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ಒದಗಿಸಲು ತಿಳಿಸಿದರು.
ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಟ 20 ಕ್ವಿಂಟಾಲ್ ರಾಗಿ ಖರೀದಿಸಲಾಗುವುದು. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು (ದಕ್ಷಿಣ) ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ.
ಡಿಸೆಂಬರ್ 15 ರಿಂದ ರಾಗಿ ಖರೀದಿಗೆ ರೈತರ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. 2023 ರ ಜನೆವರಿ 1 ರಿಂದ ಮಾರ್ಚ್ 31 ರವರೆಗೆ ಖರೀದಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಖರೀದಿ ಕೇಂದ್ರಗಳ ಸ್ಥಾಪನೆ, ರೈತರ ನೋಂದಣಿಗೆ ಸಿದ್ಧತೆ ಮಾಡಿಕೊಳ್ಳಬೇಕು.
ಕರಪತ್ರಗಳ ವಿತರಣೆ, ರೈತಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ ಸೇರಿದಂತೆ ರೈತರು ಸೇರುವ ಮೊದಲಾದ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿ ಕೃಷಿಕರಿಗೆ ಮಾಹಿತಿ ನೀಡಬೇಕು. ರಾಗಿ ಸಂಗ್ರಹಣೆಗೆ ಜಿಲ್ಲೆಯ ಉಗ್ರಾಣಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (ಕೆಎಫ್‌ಸಿಎಸ್‌ಸಿ ಬೆಂಗಳೂರು (ದಕ್ಷಿಣ) ವ್ಯವಸ್ಥಾಪಕ ರಾಘವೇಂದ್ರ ಮಾತನಾಡಿ, ರೈತರಿಂದ ಬರುವ ರಾಗಿಯನ್ನು ಕೆಎಫ್‌ಸಿಎಸ್‌ಸಿ ವತಿಯಿಂದ ಉಚಿತವಾಗಿ ನೀಡಲಾಗುವ ಗೋಣಿ ಚೀಲದಲ್ಲಿ ತುಂಬಿಕೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಗಿರಿಜಾದೇವಿ.ಜಿ ಹಾಗೂ ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…