ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು ಲೋಪವೆಸಗಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಠಣಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸೂಚಿಸಿದರು.
ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನ್ಸಿ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ(MSP) ರೈತರಿಂದ ಖರೀದಿಸುವ ರಾಗಿ ,ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ MSPಯ ಅಧ್ಯಕ್ಷರಿದ್ದು, ಆಹಾರ ಧಾನ್ಯಗಳು ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅವರ ಮೇಲೆ ಕ್ರಮ ತೆಗೆದುಕೊಳ್ಳುಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳನ್ನು ಹಾಗೂ ಜೋಳ ಪ್ರತಿ ಕ್ವಿಂಟಾಲ್ ಹೈಬ್ರೀಡ್ ಜೋಳ 3,371
ಹಾಗೂ ಮಾಲದಂಡಿ ಜೋಳ 3,421
ಭತ್ತಕ್ಕೆ ಸಾಮಾನ್ಯವಾಗಿ ಪ್ರತಿ ಕ್ವಿಂಟಾಲ್ 2,300, ಗ್ರೇಡ್ ಎ 2,320 ದರ ನಿಗದಿಯಾಗಿದ್ದು, ಈ ಧರದಲ್ಲಿ ರೈತರಿಂದ ಖರೀದಿಸಿ ಅವರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯ ಮಾಡಬೇಕು ಎಂದರು.
ಜಿಲ್ಲಾಧಿಕಾರಿಗಳು ಖರೀದೀ ಕೇಂದ್ರಗಳ ಸ್ಥಳಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಶಾಮಿಯಾನದ ವ್ಯವಸ್ಥೆಯನ್ನು ಕಲ್ಲಿಸಬೇಕು. ಏಕೆಂದರೆ ಮಾರ್ಚ್ ತಿಂಗಳಲ್ಲಿ ಹೆಚ್ಚಿನ ಬಿಸಿಲಿರಿವುದರಿಂದ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ 15 ಕೆಜಿ ಅಕ್ಕಿ ವಿತರಿಸಲು ತೀರ್ಮಾನಿಸಿದ್ದು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.
ಜಿಲ್ಲಾಧಿಕಾರಿಗಳೇ ನೇರವಾಗಿ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ಮಾಡಬೇಕು. ರಾಗಿಯನ್ನು ಖರೀದಿಸುವ ಕೇಂದ್ರಗಳಲ್ಲಿ ತೂಕದಲ್ಲಿ ವ್ಯತ್ಯಾಸಗಳು ಕಾಣದಂತೆ ನಿಗಾವಹಿಸಬೇಕು. ಲೋಪವೆಸಗಿದ್ದಲ್ಲಿ ಅಧಿಕಾರಿಗಳನ್ನು ಸ್ಥಳದಲ್ಲಿಯೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತ ವಾಸಿ ರೆಡ್ಡಿ ವಿಜಯಜೋತ್ನಾ, ನಿಗಮ ನಿರ್ದೇಶಕ ಚಂದ್ರಕಾತ್, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕರಾದ ಎಂ ಎಸ್ ಎನ್ ಬಾಬು. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.