ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕಥೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.
ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ
ನುಡಿ ನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆ.ವಿ. ತಿರುಮಲೇಶ್ ಕನ್ನಡದ ನವ್ಯ ಸಾಹಿತ್ಯದ ಸಂದರ್ಭದಲ್ಲಿ ಬರೆಯಲು ಪ್ರಾರಂಭ ಮಾಡಿದ ಅವರು, ಸುಮಾರು ಐದು ದಶಕಗಳ ಕಾಲ ಕವಿತೆ, ಕಥೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಎಂಬ ಎರಡು ಜನಪ್ರಿಯ ಕೃತಿಗಳನ್ನು ರಚಿಸಿದ್ದಾರೆ. ಇವರ 20 ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಮುಖ್ಯ ಕವನ ಸಂಕಲನಗಳಾಗಿವೆ. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು. ತಿರುಮಲೇಶರು ಪ್ರಸ್ತುತ ಅಮೇರಿಕದ ಅಯೋವ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ಪ್ರಾಧ್ಯಾಪಕರಾದ , ನಂದನ, ಕಛೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಗಂಗರಾಜು, ಮತ್ತಿತರರು ಹಾಜರಿದ್ದರು.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…