ಕನ್ನಡಪರ ಸಂಘಟನೆ ಹಾಗೂ ಹೋರಾಟಕ್ಕೆ ಎಲ್ಲರ ಬೆಂಬಲ ಅಗತ್ಯ- ಶಾಸಕ ಧೀರಜ್ ಮುನಿರಾಜ್

ಕನ್ನಡ ನಾಡು ನುಡಿ ಉಳಿವಿಗಾಗಿ ನಡೆಯುವ ಪ್ರತಿಯೊಂದು ಹೊರಾಟಕ್ಕೂ ಕನ್ನಡಿಗರಾಗಿ ನಮ್ಮ ಬೆಂಬಲ ಸದಾ ಇರಬೇಕು. ಆಡಳಿತ ವಿಚಾರದಲ್ಲೂ ಸಹ ಅಧಿಕಾರಿಗಳು ಕನ್ನಡ ಪರ ಹೋರಾಟಕ್ಕೆ ಬೆಂಬಲಕ್ಕೆ ನಿಲ್ಲಬೇಕೆಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಡಾ.ರಾಜಕುಮರ್ ಕಲಾಮಂದಿರದಲ್ಲಿ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣಗೊಂಡ ದಿನ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಬಹಳ ವಿಶೇಷವಾದ ದಿನ. ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು. ಸ್ವಾತಂತ್ರ‍್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಆಚರಿಸಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.

ಕ್ರಿ.ಶ.450ರ ಕನ್ನಡ ಭಾಷೆಯ ಮೊಟ್ಟ ಮೊದಲ ಹಲ್ಮಿಡಿ ಶಾಸನದಲ್ಲಿ ಕನ್ನಡದ ಪದಗಳಿವೆ. ಕ್ರಿ.ಶ. 850 ರ ಕನ್ನಡದ ಮೊಟ್ಟ ಮೊದಲ ಗ್ರಂಥ ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ವಿಸ್ತಾರದ ಬಗ್ಗೆ ಉಲ್ಲೇಖವಿದೆ. 21ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನಿಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೊಂದು, ಈ ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ. ಆದ್ದರಿಂದ, ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆ ಎಂದರು.

ಇ‌ಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಆ ಮಹಾನ್ ಚೇತನಗಳನ್ನೆಲ್ಲಾ ಇಂದು ಕೃತಜ್ಞತೆಯಿಂದ ಸ್ಮರಿಸುತ್ತೇನೆ ಎಂದರು.

ಮಾಧ್ಯಮ ಕ್ಷೇತ್ರದಲ್ಲಿ ಗಂಗರಾಜು, ಯಕ್ಷಗಾನ ಕ್ಷೇತ್ರದಲ್ಲಿ  ದೀಕ್ಷಾ ಕಂಠಿ, ರಂಗಭೂಮಿ ಕ್ಷೇತ್ರದಲ್ಲಿ ಎಂ.ಜಿ ರಾಮಚಂದ್ರ, ಸಮಾಜ ಸೇವೆ ಕ್ಷೇತ್ರದಲ್ಲಿ ಅನ್ನಪೂರ್ಣ, ಕನ್ನಡಪರ ಹೋರಾಟಗಾರರಾದ ಸುರೇಶ್ ಸೇರಿದಂತೆ ಒಟ್ಟು 14 ಮಂದಿ ಗಣ್ಯರಿಗೆ ಸನ್ಮಾನಿಸಲಾಯಿತು.

ಈ ವೇಳೆ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾ.ಪಂ ಇಒ ಮುನಿರಾಜು, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಹೋರಾಟಗಾರರು, ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

5 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

6 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

6 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

10 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

11 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

16 hours ago