Categories: Home

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಅ.19 ಬೃಹತ್ ಪ್ರತಿಭಟನೆ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ, ಅ.19 ರಂದು ಬೆಂಗಳೂರಿನಲ್ಲಿ ಬೆಂಗಳೂರು ಮೆಜೆಸ್ಟಿಕ್ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಮುಂಭಾಗದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದು ಕನ್ನಡ ಜಾಗೃತಿ  ವೇದಿಕೆ ಜಿಲ್ಲಾಧ್ಯಕ್ಷ ಎಂ.ನಾಗರಾಜ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಜಾಗೃತ ವೇದಿಕೆ ವತಿಯಿಂದ ನಡೆದ ಸಭೆಯಲ್ಲಿ  ಪ್ರತಭಟನಾ ರ್ಯಾಲಿಯ ಕರಪತ್ರಗಳನ್ನು ಬಿಡುಗಡೆ ಮಾಡಿ ಸುದ್ಧಿಗಾರರೊಂದಿಗೆ ಮಾತನಾಡಿದರು.

ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ 68 ವರ್ಷಗಳು ಕಳೆದಿದ್ದರೂ ಇನ್ನು ಅದರ ಆಶಯಗಳು ಈಡೇರಿಲ್ಲ. ಇಲ್ಲಿನ ರಾಜಕೀಯ ಪಕ್ಷಗಳಿಗೆ ಕನ್ನಡಿಗರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಲ್ಲಿ ರಾಜ್ಯದಲ್ಲಿ ಆಡಳಿತ ನಡೆಸಿರುವ ಎಲ್ಲಾ ಸರ್ಕಾರಗಳು ವಿಫಲವಾಗಿವೆ. ಯಾವುದೇ ಖಾಸಗಿ ವಲಯದ ಉದ್ಯಮಗಳು ಪ್ರಾರಂಭಿಸಲು ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಿಕೊಡುತ್ತದೆ. ಈ ನಾಡಿನ ರೈತರು ತಮ್ಮ ಭೂಮಿ ನೀಡಿರುತ್ತಾರೆ. ಆದರೆ, ಸ್ಥಳೀಯರಿಗೆ ಉದ್ಯೋಗ ಮಾತ್ರ ದೊರೆಯುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಳ ಹಂತದ ಉದ್ಯೋಗಗಳಿಗೆ ಮಾತ್ರ ಕನ್ನಡಿಗರನ್ನು ಸೀಮಿತಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ, ದೂರವಾಣಿ ಇಲಾಖೆ, ಅಂಚೆ ಇಲಾಖೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಹ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಕನ್ನಡಿಗರನ್ನು ವಂಚಿಸಿ ಪರ ರಾಜ್ಯದವರಿಗೆ ಉದ್ಯೋಗ ನೀಡುವ ಯಾವುದೇ ಕಂಪನಿ ಕಾರ್ಖಾನೆ ಆದರೂ ಸರಿ, ಅವರಿಗೆ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಹಾಗೂ ಪರವಾನಗಿಯನ್ನು ರದ್ದು ಮಾಡುವ ನಿರ್ಧಾರ ಸರ್ಕಾರ ಕೈಗೊಳ್ಳಬೇಕಿದೆ.  ಈ ನಿಟ್ಟಿನಲ್ಲಿ ನಮ್ಮ ಹಕ್ಕು ನಮ್ಮ ಉದ್ಯೋಗ ನಮ್ಮ ಅಸ್ತಿತ್ವ- ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವ ಧ್ಯೇಯದೊಂದಿಗೆ  ಕನ್ನಡ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ  ಮಂಜುನಾಥ್ ದೇವಣ್ಣ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು,  ಪ್ರತಿಭಟನೆಗೆ ಎಲ್ಲಾ ಕನ್ನಡಪರ ಸಂಘಟನೆಗಳು, ಕನ್ನಡಪರ ಹೋರಾಟಗಾರರು, ಕನ್ನಡಪರ ಚಿಂತಕರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಕನ್ನಡ ಜಾಗೃತಿ ವೇದಿಕೆ ಹಿರಿಯ ಮುಖಂಡ ಎಚ್.ಎಸ್.ಅಗ್ನಿ ವೆಂಕಟೇಶ್, ತಾಲೂಕು ಅಧ್ಯಕ್ಷ ಶಶಿಧರ್.ಸಿ, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್. ಕೆ.ಆರ್, ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣ, ಶಿವಕುಮಾರ್, ತಾಲೂಕು ಮಹಿಳಾ ಉಪಾಧ್ಯಕ್ಷೆ ಮುನಿರತ್ನ ,  ಮುಖಂಡರಾದ ಗೌರಮ್ಮ, ಸದಸ್ಯರಾದ ಮೋಹನ್, ಲಿಂಗೇಶ್.ಪಿ, ಅಜಿತ್ ಕುಮಾರ್, ಹೇಮಂತ್ ಹಾಜರಿದ್ದರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

37 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 hour ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

3 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago