Categories: ಸಿನಿಮಾ

ಕನ್ನಡಿಗರಿಗೆ ಪ್ರಭಾಸ್ ನಟನೆಯ ‘ಆದಿಪುರುಷ್’ ಭಾರೀ ನಿರಾಸೆ.. ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ.. ಕನ್ನಡ ಪ್ರೇಕ್ಷಕರ ಕೋಪಕ್ಕೆ ಗುರಿಯಾಯ್ತಾ ಆದಿಪುರುಷ್..?

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ‘ಆದಿಪುರುಷ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭಗೊಂಡಿದೆ. ಕನ್ನಡಿಗರಿಗೆ ‘ಆದಿಪುರುಷ್’ ಭಾರೀ ನಿರಾಸೆ ನೀಡಿದ್ದು, ಕನ್ನಡದಲ್ಲಿ ಸಿನಿಮಾ ಶೋಗಳೇ ಇಲ್ಲ. ಕನ್ನಡ ಪ್ರೇಕ್ಷಕರ ಕೋಪಕ್ಕೆ ಸಿನಿಮಾ ಗುರಿಯಾಯ್ತಾ? ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ ಹಾಕಿದ್ದು, ಬೆಂಗಳೂರಿನಲ್ಲೂ ತೆಲುಗು ಶೋಗಳಿಗೆ ಬೇಡಿಕೆಯಿದೆ.

‘ಆದಿಪುರುಷ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಸಿನಿಮಾ ವೀಕ್ಷಣೆಗೆ ಈಗಾಗಲೇ ಟಿಕೆಟ್ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಜೂನ್.16ಕ್ಕೆ ‘ಆದಿಪುರುಷ್’ ಬೆಳ್ಳಿ ತೆರೆಗೆ ಬರಲಿದ್ದು, ಈ ಸಿನಿಮಾದಲ್ಲಿ ನಟ ಪ್ರಭಾಸ್ ಶ್ರೀರಾಮನಾಗಿ ಕಾಣಿಸಿಕೊಳ್ತಿದ್ದಾರೆ. ‘ಆದಿಪುರುಷ್’ ಸಿನಿಮಾದ ಟಿಕೆಟ್ ಬಲು ದುಬಾರಿಯಾಗಿದ್ದು, ಆದರೂ ಟಿಕೆಟ್ ಬುಕ್ಕಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಟಿಕೆಟ್ 750 ರಿಂದ 1250ಕ್ಕೆ ಸಿಗ್ತಿದ್ದು, ಏಕಪರದೆಯಲ್ಲಿ ಟಿಕೆಟ್ ಗೆ 200ರೂ ಇದೆ.

ಇಂದು ಚಿತ್ರದ ಮುಂಗಡ ಬುಕಿಂಗ್ ತೆರೆಯಲ್ಪಟ್ಟಿದ್ದು, ಕರ್ನಾಟಕದಲ್ಲಿಯೂ ಸಹ ಬುಕಿಂಗ್ ಶುರುವಾಗಿದೆ. ಕಾರ್ತಿಕ್ ಗೌಡ ಒಡೆತನದ ಕೆಆರ್‌ಜಿ ಸ್ಟುಡಿಯೋಸ್ ಆದಿಪುರುಷ್ ಚಿತ್ರದ ಕರ್ನಾಟಕ ವಿತರಣಾ ಹಕ್ಕನ್ನು ಖರೀದಿಸಿದ್ದು, ರಾಜ್ಯಾದ್ಯಂತ ಚಿತ್ರವನ್ನು ವಿತರಿಸಲಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ತುಮಕೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಗಡ ಬುಕ್ಕಿಂಗ್ ತೆರೆಯಲಾಗಿದೆ.

ಚಿತ್ರಕ್ಕೆ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ಹಾಗೆಯೇ ಮೊದಲು ಈ ಚಿತ್ರ ಭಾರೀ ಟೀಕೆಗೆ ಗುರಿಯಾಗಿತ್ತು. ಇದೀಗ ‘ಆದಿಪುರುಷ್’ ಬಿಡುಗಡೆಗಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

9 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

22 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

23 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago