ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು-ಜಿ.ಎಸ್.ಸ್ಮಿತಾ

ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು.‌ ಕನ್ನಡ ಭಾಷೆಯನ್ನು ಎಲ್ಲೆಡೆ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ  ಬಾಲಕಿಯರ ವಿದ್ಯಾರ್ಥಿನಿಲಯಲ್ಲಿ ನಡೆದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಶ್ರೀಮಂತ ಪರಂಪರೆ ಇದೆ. ಕನ್ನಡ ಸಾಹಿತ್ಯದಲ್ಲಿ ಶ್ರೇಷ್ಠ ಕೃತಿಗಳು ಬಂದಿದೆ. ಎಂದಿಗೂ ಕನ್ನಡ ಸಾಹಿತ್ಯದ ಓದುಗರು ಕಡಿಮೆಯಾಗಬಾರದು. ಕನ್ನಡ ನಾಡು ಮೊದಲಿನಿಂದಲೂ ಸರ್ವಜನಾಂಗದ ತೋಟ ಎಂಬ ಕೀರ್ತಿಗೆ ಪಾತ್ರವಾಗಿದೆ. ಬೆಂಗಳೂರು ಇಂದು ದೇಶದ ರಾಜಧಾನಿಯಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿರುವ ಕನ್ನಡಿಗರು ಕನ್ನಡ ಭಾಷೆಯಲ್ಲೇ ಮಾತನಾಡಿದರೆ ಇತರರು ಕನ್ನಡ ಕಲಿಯಲು ಸಾಧ್ಯವಾಗುತ್ತದೆ ಎಂದರು.

ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳು ಈಗ ಕನ್ನಡದಲಿ ನಡೆಯುತ್ತಿರುವುದು ಸ್ವಾಗತಾರ್ಹ ವಿಷಯವಾಗಿದೆ. ಕನ್ನಡದಲ್ಲಿ ವ್ಯಾಸಂಗ ಮಾಡಿದವರು ಸಹ ಸ್ಪರ್ಧಾತ್ಮಕ ಪರೀಕ್ಷಗಳಿಗೆ ಸೂಕ್ತ ಸಿದ್ದತೆ ನಡೆಸಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಮಾಹಿತಿಗಳು ಈಗ ಕನ್ನಡ ಜಾಲತಾಣಗಳಲ್ಲೂ ದೊರೆಯುತ್ತವೆ. ಇವುಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡಿಗರು ಸ್ಥಳೀಯ ಉದ್ಯೋಗಗಳನ್ನು ಪಡೆಯಲು ಕೌಶಲ್ಯ ಜ್ಞಾನವನ್ನು ಅರಿಯಬೇಕೆಂದರು.

ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಕನ್ನಡ ಭಾಷೆ ಅತ್ಯಂತ ವೈಜ್ಞಾನಿಕವಾಗಿ ರೂಪಿಗೊಂಡ ಭಾಷೆಯಾಗಿದೆ. ಕನ್ನಡ ಲಿಪಿಯನ್ನು ಲಿಪಿಗಳ ರಾಣಿ ಎಂದು ಕರೆಯಲಾಗಿದೆ. ಕನ್ನಡ ಭಾಷೆಯ ಅನನ್ಯತೆಯನ್ನು ಕನ್ನಡ ಕವಿಗಳು ಹಾಡಿ ಹೊಗಳಿದ್ದಾರೆ. ಹಚ್ಚೇವು ಕನ್ನಡದ ದೀಪ ಗೀತೆಯನ್ನು ಕೇಳದ ಕನ್ನಡಿಗರೇ ಇಲ್ಲ. ಕನ್ನಡತ್ವವನ್ನು  ಡಿ.ಎಸ್.ಕರ್ಕಿಯವರು ತಮ್ಮ  ಕವಿತೆಯ ಮೂಲಕ ಕಟ್ಟಿಕೊಟ್ಟಿದ್ದಾರೆ.‌ ಕನ್ನಡ ನೆಲದಲ್ಲಿ ಕನ್ನಡತನ ಎಂದಿಗೂ ಮರೆಯಾಗಬಾರದು. ಕನ್ನಡತನವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದರು.‌

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ಭಾಷೆಯನ್ನು ಎಲ್ಲಾ ರಂಗದಲ್ಲೂ ಸಶಕ್ತ ಭಾಷೆಯಾಗಿ ಬಳಸಬೇಕಾಗಿದೆ. ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣವನ್ನು ಕನ್ನಡ ಭಾಷಾ ಮಾಧ್ಯಮದಲ್ಲಿ ಕಲಿಯುವ ವಾತಾವರಣ ನಿರ್ಮಾಣ ಆಗಬೇಕಾಗಿದೆ. ಇದಕ್ಕಾಗಿ ಕನ್ನಡ ಪದಕೋಶವನ್ನು ಕನ್ನಡ ಭಾಷಾ ತಜ್ಞರು ಸಿದ್ದಗೊಳಿಸಬೇಕು. ಕರ್ನಾಟಕ ರಾಜ್ಯದ ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯಲ್ಲಿ ಎಲ್ಲಾ ವ್ಯವಹಾರಗಳು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಿತಾದೇವಿ ನಾಯಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಮತಾ, ನಿಲಯದ ಪಾಲಕರುಗಳಾದ ಚಂದ್ರಶೇಖರ್, ವೆಂಕಟೇಶ್ ಮತ್ತು ವಿದ್ಯಾರ್ಥಿನಿಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago