ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅಪರ್ಣಾ ನುಡಿನಮನ

ದೊಡ್ಡಬಳ್ಳಾಪುರ:ಸರಳ, ಸುಸ್ಪಷ್ಟ ಕನ್ನಡವನ್ನು ಬಳಸಿ ಕಾರ್ಯಕ್ರಮಗಳ ನಿರೂಪಣೆಯ ಮೂಲಕ ಗಮನ ಸೆಳೆದಿದ್ದ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನ ಹಿನ್ನಲೆ ಇಲ್ಲಿನ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಶುಕ್ರವಾರ ನುಡಿನಮನ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು.

ಅಪರ್ಣಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರೊ.ರವಿಕಿರಣ್‌ ಕೆ.ಆರ್, ಅಪರ್ಣಾ ಅವರು ಕನ್ನಡ ಕಿರುತೆರೆಯಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜನಪ್ರಿಯತೆ ಪಡೆದವರು. ದೂರದರ್ಶನದ ಮೂಲಕ ಆರಂಭವಾದ ಅವರ ನಿರೂಪಣಾ ಪಯಣ ಆಕಾಶವಾಣಿ, ಹಲವು ಖಾಸಗಿ ವಾಹಿನಿಗಳಲ್ಲೂ ಗಮನ ಸೆಳೆದಿತ್ತು. ಸರ್ಕಾರಿ ಕಾರ್ಯಕ್ರಮಗಳ ಅಚ್ಚುಕಟ್ಟಾದ ನಿರೂಪಣೆಗೂ ಅವರು ಹೆಸರಾಗಿದ್ದರು. ಬೆಂಗಳೂರು ಮೆಟ್ರೋ ಉದ್ಘೋಷಕಿಯಾಗಿಯೂ ಅವರ ದನಿ ಎಲ್ಲ ಕನ್ನಡಿಗರ ಮನೆ-ಮನವನ್ನು ಮುಟ್ಟಿತ್ತು ಎಂದು ಸ್ಮರಿಸಿದರು.
ಭಾಷೆಯ ಘನತೆಗೆ ಯಾವುದೇ ಲೋಪವಾಗದಂತೆ ಸಮರ್ಥವಾಗಿ ಭಾಷೆಯನ್ನು ಬಳಕೆ ಮಾಡುವ ಕೌಶಲ ಹೊಂದಿದ್ದ ಅವರು, ಸರಳ, ಸ್ಪಷ್ಟ ಹಾಗೂ ಅಪಭ್ರಂಶರಹಿತ ಹಿತಕಾರಿ ಕನ್ನಡವನ್ನು ಬಳಕೆ ಮಾಡುತ್ತಿದ್ದ ರೀತಿಯೇ ವಿಭಿನ್ನ. ಕನ್ನಡ ಸಿನಿಮಾ ಕ್ಷೇತ್ರದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಅವರು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಮಾತನಾಡಿ, ಕನ್ನಡಿಗರು ಎಂದೂ ಮರೆಯದ ದನಿ ಅಪರ್ಣ ಅವರದ್ದು. ದೂರದರ್ಶನ ವಾಹಿನಿಯ ಹಲವು ಕಾರ್ಯಕ್ರಮಗಳನ್ನು ಅವರು ಪ್ರಸ್ತುತಪಡಿಸುತ್ತಿದ್ದ ರೀತಿ ಅತ್ಯಂತ ಮನನೀಯವಾಗಿತ್ತು ಎಂದರು.

ಕಾರ್ಯಕ್ರಮದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಆರ್.ರಮೇಶ್, ಕಾರ್ಯದರ್ಶಿ ಅರವಿಂದ್, ಸಂಘಟನಾ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ಉದಯ್, ವಿನಯ್ ಕುಮಾರ್, ಶಿವಾನಂದ್, ಶಕುಂತಲಾ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

5 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

7 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

9 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

11 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

16 hours ago