ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎಂದರು.
ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಹೇಳಿದ್ದಾರೆ.
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದರು.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…