ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು- ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ

ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಸುವರ್ಣ ಸಂಭ್ರಮ ಆಚರಿಸುತ್ತಿರುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ. ಕನ್ನಡಿಗರು ಪ್ರಾದೇಶಿಕ ಹಿನ್ನೆಲೆಯಲ್ಲಿ  ಸ್ವಾಭಿಮಾನಗಳಾಗಬೇಕು ಎಂದು ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ ಹೇಳಿದರು.

ನಗರದ ಹಳೇ ಬಸ್ ನಿಲ್ದಾಣ ಬಳಿಯ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು. ಕನ್ನಡ, ಕನ್ನಡಿಗರು ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಕನ್ನಡಿಗರು ಚಿಂತನೆ ನಡೆಸಬೇಕಾಗಿದೆ ಎಂದರು.

ಸೌಹಾರ್ದತೆಗೆ  ಹೆಸರಾಗಿರುವ ಕರ್ನಾಟಕದಲ್ಲಿ ಎಂದಿಗೂ ಮತೀಯ ಶಕ್ತಿಗಳ ಬೆಳವಣಿಗೆ ಅವಕಾಶ ನೀಡಬಾರದು.  ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಬಗ್ಗೆ ಹರಿಸಲು ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನು ತೋರಿಸುತ್ತಿಲ್ಲ. ಪ್ರಾದೇಶಿಕ ಪಕ್ಷಗಳ ಅಗತ್ಯವನ್ನು ಕರ್ನಾಟಕ ಜನರು ಬಯಸುತ್ತಾ ಬಂದಿದ್ದರೂ ಇನ್ನು ಈಡೇರಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.

ನಂತರ ಹೊರರಾಜ್ಯಗಳಿಂದ ಬಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಾ ಕನ್ನಡ ಕಲಿತು ಸುಲಲಿತವಾಗಿ ಮಾತನಾಡುತ್ತಾ, ಓದುವುದನ್ನು ಕಲಿತವರಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸುವ ಮೂಲಕ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿರುವ  ಬಿಹಾರ ರಾಜ್ಯದ ಮಣೀಶ್ ಶರ್ಮ ಮತ್ತು  ಅನಿಲ್ ಗುಪ್ತ ಅವರನ್ನು ಕನ್ನಡಪರ ಸಂಘಟನೆಗಳ ಮುಖಂಡರು  ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಮಾಜಿ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ   ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿಗಳಾದ ಚಿಕ್ಜತುಮಕೂರು ಮುನಿರಾಜು, ನಾಗರತ್ನಮ್ಮ, ಗೆಜ್ಜಗದಹಳ್ಳಿ ಮುನಿರಾಜು, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜಶಿರವಾರ, ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪಿ.ಎ.ವೆಂಕಟೇಶ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಮುನಿಪಾಪಣ್ಣ, ಕನ್ನಡಪರ ಸಂಘಟನೆಯ ನಾಗರಾಜ್, ಸೂರ್ಯ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಪತ್ರಕರ್ತ ರಹೀಮ್, ಎಂಎಬಿಎಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

4 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

6 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

9 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

20 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

21 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago