
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಎಂ.ಎಸ್.ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಭಾನುವಾರ ವಿಧಿವಶರಾಗಿದ್ದಾರೆ.
ಎಂ. ಎಸ್. ಉಮೇಶ್ ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಜನಿಸಿದರು. ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು.
ಮಕ್ಕಳ ರಾಜ್ಯ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಕಾಮನಬಿಲ್ಲು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಮೇಘ ಮಂದಾರ, ಆಕಸ್ಮಿಕ, ಸರ್ವರ್ ಸೋಮಣ್ಣ, ಮೇಘಮಾಲೆ, ನನ್ನಾಸೆಯ ಹೂವೆ, ಜಾಕಿ, ರ್ಯಾಂಬೊ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ….