ಕನ್ನಡ ಜಾಗೃತಿ ವೇದಿಕೆಯ 30ನೇ ವರ್ಷದ ವಾರ್ಷಿಕೋತ್ಸವ: ಫೆ. 4ರಂದು ಕನ್ನಡಿಗರ ಬೃಹತ್ ಸಮಾವೇಶ

ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ‌.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. ಎಂ ಹೇಳಿದರು.

ನಗರದ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ದೇವ ಅವರ ನೇತೃತ್ವದಲ್ಲಿ‌ ಸಮಾವೇಶ ನಡೆಯಲಿದೆ. ಕನ್ನಡಪರ ಸಂಘನೆಗಳ ಮುಖಂಡರು, ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷ, ಕರ್ನಾಟಕ ಏಕೀಕರಣವಾಗಿ 68 ವರ್ಷ ಹಾಗೂ ಕನ್ನಡ ಜಾಗೃತಿ ವೇದಿಗೆ ಸ್ಥಾಪನೆಯಾಗಿ 30 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಜನಪದ ಕಲಾತಂಡಗಳು ಮತ್ತು ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ. ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದರು.

ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಮಾತನಾಡಿ, ಕನ್ನಡ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಸ್ವಾಭಿಮಾನಿ ಕನ್ನಡಿಗರ ಸಮಾವೇಶದಲ್ಲಿ ತಾಲೂಕಿನ ಕನ್ನಡಾಭಿಮಾನಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ನಾವೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು ಎಂ. ಹಾಗೂ ಪದಾಧಿಕಾರಿಗಳು ಕನ್ನಡಪರ‌ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ, ಮಹಿಳಾ ಮುಖಂಡರಾದ ಅಂಬಿಕಾ ಟಿ, ವಿಶಾಲಾಕ್ಷಿ, ಪಾರ್ವತಿ, ಲಕ್ಷ್ಮಿ, ಚಂದ್ರಕಲಾ, ತಾಲೂಕು ಕಾರ್ಯದರ್ಶಿ ಸುಧಾಕರ್, ಯುವ ಘಟಕದ ಅಧ್ಯಕ್ಷ ತರುಣ್ ಸರ್ಜಾ, ಕಸಬಾ ಅಧ್ಯಕ್ಷ ಗಿರೀಶ್, ಸಂಘಟನಾ ಕಾರ್ಯದರ್ಶಿ  ವಿಶ್ವನಾಥ್, ಚಂದನ್, ರಮೇಶ್, ಜಗದೀಶ್, ಕಾರ್ಮಿಕ ಘಟಕದ  ದಿಲ್ ರಾಜ್, ಆಟೋ ಘಟಕದ ರಾಘವ, ವಿದ್ಯಾರ್ಥಿ ಘಟಕದ ಚಂದನ್, ಮುಖಂಡರಾದ ರಾಕಿ, ಕೃಷ್ಣಪ್ಪ ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

1 hour ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago