ಕನ್ನಡ ಜಾಗೃತಿ ವೇದಿಕೆಯ 30ನೇ ವಾರ್ಷಿಕೋತ್ಸವದ ಪ್ರಯುಕ್ತ ಫೆ.4 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ ಎಂದು ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು. ಎಂ ಹೇಳಿದರು.
ನಗರದ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ದೇವ ಅವರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕನ್ನಡಪರ ಸಂಘನೆಗಳ ಮುಖಂಡರು, ಕನ್ನಡದ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷ, ಕರ್ನಾಟಕ ಏಕೀಕರಣವಾಗಿ 68 ವರ್ಷ ಹಾಗೂ ಕನ್ನಡ ಜಾಗೃತಿ ವೇದಿಗೆ ಸ್ಥಾಪನೆಯಾಗಿ 30 ವರ್ಷಗಳಾದ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಜನಪದ ಕಲಾತಂಡಗಳು ಮತ್ತು ಸ್ತಬ್ಧ ಚಿತ್ರಗಳ ಭವ್ಯ ಮೆರವಣಿಗೆ ಇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ. ಕನ್ನಡಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಮಾತನಾಡಿ, ಕನ್ನಡ ಜಾಗೃತಿ ವೇದಿಕೆ ಹಮ್ಮಿಕೊಂಡಿರುವ ಸ್ವಾಭಿಮಾನಿ ಕನ್ನಡಿಗರ ಸಮಾವೇಶದಲ್ಲಿ ತಾಲೂಕಿನ ಕನ್ನಡಾಭಿಮಾನಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು. ನಾವೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಕನ್ನಡ ಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜು ಎಂ. ಹಾಗೂ ಪದಾಧಿಕಾರಿಗಳು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಂಜಪ್ಪ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ, ಮಹಿಳಾ ಮುಖಂಡರಾದ ಅಂಬಿಕಾ ಟಿ, ವಿಶಾಲಾಕ್ಷಿ, ಪಾರ್ವತಿ, ಲಕ್ಷ್ಮಿ, ಚಂದ್ರಕಲಾ, ತಾಲೂಕು ಕಾರ್ಯದರ್ಶಿ ಸುಧಾಕರ್, ಯುವ ಘಟಕದ ಅಧ್ಯಕ್ಷ ತರುಣ್ ಸರ್ಜಾ, ಕಸಬಾ ಅಧ್ಯಕ್ಷ ಗಿರೀಶ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ್, ಚಂದನ್, ರಮೇಶ್, ಜಗದೀಶ್, ಕಾರ್ಮಿಕ ಘಟಕದ ದಿಲ್ ರಾಜ್, ಆಟೋ ಘಟಕದ ರಾಘವ, ವಿದ್ಯಾರ್ಥಿ ಘಟಕದ ಚಂದನ್, ಮುಖಂಡರಾದ ರಾಕಿ, ಕೃಷ್ಣಪ್ಪ ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಜರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…