ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ-ಸರ್ವೆಯಕ್ಷಣಾಧಿಕಾರಿ ಕೆ.ಎ‌.ಶಾಲಿನಿ

ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡ ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮೆಲ್ಲರ  ಕರ್ತವ್ಯ ಆಗಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ‌.ಶಾಲಿನಿ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ,  ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಆಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮ ಕ್ಷೇತ್ರದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯು ವೈವಿಧ್ಯಮಯಲ್ಲೂ ಏಕತೆಗೆ ಹೆಸರಾಗಿದೆ. ಕರ್ನಾಟಕದ ಕಲೆ, ಸಾಹಿತ್ಯ, ಸಂಗೀತ, ಶಿಲ್ಪ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳು ಕನ್ನಡಿಗರ ಗೌರವವನ್ನು ಎಲ್ಲೆಡೆ ಹರಡಿವೆ. ಕನ್ನಡ ನಾಡು ಸಮನ್ವಯ ಮತ್ತು ಸಾಮರಸ್ಯದ ನಾಡು ಎಂದು ಕರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಜವಾಹರ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ಕನ್ನಡ ಕವಿಗಳು ಮಾನವೀಯ ಮೌಲ್ಯಗಳ ಮಹತ್ವವನ್ನು  ಸಾರಿದ್ದಾರೆ. ಜನಪದರು, ವಚನಕಾರರು, ಹರಿದಾಸರು, ಅನುಭಾವಿ ಸಂತರು ಉದಾತ್ತ ವಿಚಾರಗಳನ್ನು ಜನರಿಗೆ ಸರಳ ಭಾಷೆಯಲ್ಲಿ ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮತ್ತು ಉದಾತ್ತ ಚಿಂತನೆಗಳನ್ನು ಜನರು   ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಬೇಕಾಗಿದೆ. ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.

ಕನ್ನಡ ಸಪ್ತಾಹದಲ್ಲಿ ಕನ್ನಡ ನಾಡು ಮತ್ತು ನುಡಿಯ ಮಹತ್ವವನ್ನು ಕುರಿತು ವಿದ್ಯಾರ್ಥಿ ಅಭಿರಾಮ  ಮಾತನಾಡಿದರು. ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ  ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಈರಣ್ಣಸಬರದ ಮತ್ತು ವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕನ್ನಡ ಸಮೂಹಗೀತೆ,  ಜಾನಪದ ನೃತ್ಯ  ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

5 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

5 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

15 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

15 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

16 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

19 hours ago