ಕನ್ನಡ ನಾಡಿನ ಇತಿಹಾಸ, ಭಾಷೆ, ಕಲೆ ಮತ್ತು ಸಂಸ್ಕೃತಿಗೆ ಭವ್ಯ ಪರಂಪರೆ ಇದೆ. ಕನ್ನಡ ನಾಡಿನ ಪರಂಪರೆಯ ಅನನ್ಯತೆಯನ್ನು ಉಳಿಸಿ ಬೆಳಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಆಗಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರ್ವೆಯಕ್ಷಣಾಧಿಕಾರಿ ಕೆ.ಎ.ಶಾಲಿನಿ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಇರಬೇಕು. ಕನ್ನಡ ಭಾಷೆ ಎಲ್ಲಾ ವಲಯಗಳಲ್ಲಿ ಬಳಕೆಯಾಗಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಆಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮ ಕ್ಷೇತ್ರದಲ್ಲೂ ಕನ್ನಡ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯು ವೈವಿಧ್ಯಮಯಲ್ಲೂ ಏಕತೆಗೆ ಹೆಸರಾಗಿದೆ. ಕರ್ನಾಟಕದ ಕಲೆ, ಸಾಹಿತ್ಯ, ಸಂಗೀತ, ಶಿಲ್ಪ, ನೃತ್ಯ ಮುಂತಾದ ಸಾಂಸ್ಕೃತಿಕ ಕಲಾ ಪ್ರಕಾರಗಳು ಕನ್ನಡಿಗರ ಗೌರವವನ್ನು ಎಲ್ಲೆಡೆ ಹರಡಿವೆ. ಕನ್ನಡ ನಾಡು ಸಮನ್ವಯ ಮತ್ತು ಸಾಮರಸ್ಯದ ನಾಡು ಎಂದು ಕರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಜವಾಹರ ವಿದ್ಯಾಲಯದ ಪ್ರಾಂಶುಪಾಲ ಆರ್. ಚಕ್ರವರ್ತಿ ಮಾತನಾಡಿ, ಕನ್ನಡ ಕವಿಗಳು ಮಾನವೀಯ ಮೌಲ್ಯಗಳ ಮಹತ್ವವನ್ನು ಸಾರಿದ್ದಾರೆ. ಜನಪದರು, ವಚನಕಾರರು, ಹರಿದಾಸರು, ಅನುಭಾವಿ ಸಂತರು ಉದಾತ್ತ ವಿಚಾರಗಳನ್ನು ಜನರಿಗೆ ಸರಳ ಭಾಷೆಯಲ್ಲಿ ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಮತ್ತು ಉದಾತ್ತ ಚಿಂತನೆಗಳನ್ನು ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ ಸಮಾಜ ನಿರ್ಮಿಸಬೇಕಾಗಿದೆ. ವಿಶ್ವ ಮಾನವ ಪ್ರಜ್ಞೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕಾಗಿದೆ ಎಂದರು.
ಕನ್ನಡ ಸಪ್ತಾಹದಲ್ಲಿ ಕನ್ನಡ ನಾಡು ಮತ್ತು ನುಡಿಯ ಮಹತ್ವವನ್ನು ಕುರಿತು ವಿದ್ಯಾರ್ಥಿ ಅಭಿರಾಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಈರಣ್ಣಸಬರದ ಮತ್ತು ವಿದ್ಯಾಲಯದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಕನ್ನಡ ಸಮೂಹಗೀತೆ, ಜಾನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…