Categories: ಮೈಸೂರು

ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು, ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ 216 ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ತೀವ್ರ ಬರಗಾಲದ ಸ್ಥಿತಿ ಇದೆ. ಮಳೆ ಇಲ್ಲದೆ ನಾಡಿನ ರೈತ ಕುಲ, ನಾಡಿನ ಜನತೆ ಕಷ್ಟದಲ್ಲಿದ್ದಾರೆ. ಆದ್ದರಿಂದ ಅದ್ಧೂರಿಯಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

ಮೈಸೂರು ಅರಸರ ಕಾಲದಿಂದಲೂ ಅತ್ಯಂತ ವೈಭವದಿಂದ ಆಚರಿಸಲ್ಪಡುತ್ತಿರುವ ದಸರಾವನ್ನು ನಾನು ತಂದೆಯ ಹೆಗಲ ಮೇಲೆ ಕುಳಿತು ನೋಡುತ್ತಿದ್ದೆ. ರಾಜರ ಕಾಲ ಮುಗಿದು ಪ್ರಜಾರಾಜ್ಯ ಬಂದ ಬಳಿಕ ರಾಜ್ಯ ಸರ್ಕಾರ ನಾಡಹಬ್ಬವಾಗಿ ದಸರಾವನ್ನು ಆಚರಿಸುತ್ತಿದೆ ಎಂದರು.

ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಸರ್ವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ದೊರರಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಅವರ ಆಶಯಗಳ ಹಾದಿಯಲ್ಲಿ ನಮ್ಮ‌ ಸರ್ಕಾರ ಸಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ, ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

11 minutes ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

2 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

2 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

7 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

9 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

21 hours ago