ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ-ಬೆಂ.ಗ್ರಾ. ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ

ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ವಿದ್ಯಾನಿಧಿ ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪದವಿ ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಪಡೆಯಲು‌ ವಿಪುಲವಾದ ಅವಕಾಶಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಪ್ರಾರಂಭವಾಗುತ್ತಿವೆ. ಇವುಗಳ ಸದುಪಯೋಗವನ್ನು ಯುವಕರು ಪಡೆದುಕೊಳ್ಳಬೇಕು. ವೃತ್ತಿ ಜೀವನದಲ್ಲಿ ಸಹ ಉತ್ಸಾಹ ಲವಲವಿಕೆ ಹೊಂದಿರಬೇಕು ಎಂದರು.

ವಿದ್ಯಾರ್ಥಿಗಳು ನಮ್ಮ ನಾಡು ನುಡಿಯ ಹಿರಿಮೆಯನ್ನು ಅರಿಯಬೇಕು. ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಕನ್ನಡ ಪ್ರಜ್ಞೆ ಮತ್ತು ಕರ್ನಾಟಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು. ಕನ್ನಡ ದಿನಪತ್ರಿಕೆಗಳನ್ನು ಮತ್ತು ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ನಿರಂತರವಾಗಿ ಇರಬೇಕು. ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ನಾವು ಅರಿಯುವುದರೊಂದಿಗೆ ನಮ್ಮ ಜೊತೆಯವರಿಗೂ ಅರಿವು ಮೂಡಿಸಬೇಕು. ಕನ್ನಡಿಗರು ಎಷ್ಟೇ ಭಾಷೆ ಕಲಿತರೂ ಕನ್ನಡ ಭಾಷೆಯನ್ನು ಮರೆಯಬಾರದು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಾನವೀಯ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ನಾವು ಕಲಿತ ವಿದ್ಯೆಗೆ ಮತ್ತು ಹುದ್ದೆಗೆ ಗೌರವ ಬರುತ್ತದೆ. ಸ್ಪರ್ಧಾತ್ಮಕ ಕಾಲದಲ್ಲಿ ಪ್ರತಿಭೆಗೆ ಮನ್ನಣೆ ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ವಿದ್ಯೆ ಮತ್ತು ಕೌಶಲ್ಯವನ್ನು ಪಡೆಯಬೇಕು. ಬಸವಣ್ಣ ಮತ್ತು ಶರಣರು ಕಾಯಕ ಪ್ರಜ್ಞೆಯ ಮಹತ್ವವನ್ನು ಸಾರಿದರು. ಬಸವಣ್ಣನವರ ಆರ್ಥಿಕ ಮತ್ತು ಸಾಮಾಜಿಕ ಚಿಂತನೆ ಸಮಾಜ ಬದಲಾವಣೆಗೆ ಸಹಕಾರಿ‌ ಆಯಿತು ಎಂದರು.‌

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ದಿನೇಶ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ, ಉಪನ್ಯಾಸಕರುಗಳಾದ ಜಯರಾಮ್, ಚೇತನ್, ತೇಜಸ್ವಿನಿ, ಶಿವಾನಂದ್, ಶ್ರೀಧರ್, ಶಮಬೇಗಂ ಮುಂತಾದವರು ಭಾಗವಹಿಸಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

6 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

31 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago