ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ, ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ನಮ್ಮ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾಡಿನ ಎಲ್ಲ ಮಹಿಳೆಯರು ನಮ್ಮ ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸುತ್ತೇನೆ ಎಂದು ತಿಳಿಸಿದರು.
ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡ್ ಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ. ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ.
ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ.
ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ.
ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಟೀಕೆ ಮಾಡಿದರು. ಆದರೆ ನಾವು ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ.
10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡು ದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…