ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 26 ನೇ ಕನ್ನಡಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಭಾಗವಹಿಸಿದರು.
ನಂತರ ಮಾತನಾಡಿದ ಸಚಿವ, ಕನ್ನಡಭಾಷೆಯನ್ನು ಉಳಿಸಿ ಬೆಳೆಸಲು ಈ ಸಾಹಿತ್ಯ ಸಮ್ಮೇಳನಗಳು ಸಹಕಾರಿಯಾಗಲಿದೆ.
ಕನ್ನಡದದ ದಾರ್ಶನಿಕ ಕವಿಗಳಾದ ರನ್ನ , ಪಂಪ, ಕುವೆಂಪು ಹಾಗೂ ಜ್ಞಾನ ಪೀಠ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದಾರಾಬೇಂದ್ರೆ, ಚಂದ್ರಶೇಖರ ಕಂಬಾರ, ಕುವೆಂಪು ಮುಂತಾದ ಕವಿಗಳು ಈ ನಾಡಿಗೆ ತನ್ನದೇ ಆದ ಕನ್ನಡ ಸೇವೆ ಮಾಡುವ ಮೂಲಕ ಅವರ ಸಾಹಿತ್ಯ ಹಾಗೂ ಕವನಗಳನ್ನು ಈ ನಾಡಿನ ಜನತೆಗೆ ಹಾಗೂ ಮುಂದಿನ ಪೀಳಿಗೆಗೆ ನೀಡಿದ್ದಾರೆ ಎಂದರು.
ಕನ್ನಡದ ಇತಿಹಾಸ ಈ ರಾಷ್ಟ್ರದ ಭಾಷೆಯಾಗಿದ್ದು, ಕನ್ನಡದ ಶಾಸನಗಳು ಐತಿಹಾಸಿಕವಾಗಿ ಹೆಸರುವಾಸಿಯಾಗಿವೆ.
ಈ ನೆಲ, ಜಲ, ಭಾಷೆ, ನಾಡಿಗಾಗಿ ನಾವು ಸದಾ ಜೊತೆಯಾಗಿ ಕೆಲಸಮಾಡಬೇಕಿದೆ ಎಂದರು.
ಕನ್ನಡದ ಪರಂಪರೆಯನ್ನು ಉಳಿಸಲು ನಮ್ಮ ಸರ್ಕಾರ ಬದ್ದವಾಗಿದ್ದು, ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಲ್ಲಾ ರೀತಿಯ ಸಹಕಾರ ಹಾಗೂ ನೆರವನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ನಾವು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದಲ್ಲದೆ ನಮ್ಮ ಮುಂದಿನ ಪೀಳಿಗೆಯ ಜನ ಈ ಭಾಷೆಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೂಕ್ತವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಟಿ.ಕೆಂಪಣ್ಣ, ಹಿರಿಯ ಸಾಹಿತಿಗಳಾದ ಚನ್ನಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ರಾಜಣ್ಣ, ತಹಶಿಲ್ದಾರ್ ವಿಭಾ ರಾಥೋಡ್, ಡಿವೈಎಸ್ಪಿ ರವಿ, ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಹಾಗೂ ಕನ್ನಡಪರ ಚಿಂತಕರಾದ ಚುಂಚೇಗೌಡ, ರಾಮಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…