ಕನ್ನಡ ಭಾಷೆಯ ಪರಂಪರೆ ಮತ್ತು ಅನನ್ಯತೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅರಿಯಬೇಕಾಗಿದೆ. ಕನ್ನಡ ಭಾಷೆಯ ಅಧ್ಯಯನವೆಂದರೆ ಕನ್ನಡಿಗರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಧ್ಯಯನವಾಗುತ್ತದೆ ಎಂದು ಕವಿ ಚೆನ್ನಕೇಶವಮೂರ್ತಿ ತಿಳಿಸಿದರು.
ನಗರದ ಸರ್ಕಾರಿ ತೆಲುಗು ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ನಡೆದ ಸಿರಿಗನ್ನಡ ಸಂಭ್ರಮ 2023 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮನುಷ್ಯನಲ್ಲಿ ಪರಿಸರದ ಭಾಷೆಯನ್ನು ಕಲಿಯುವ ಶಕ್ತಿ ಸಹಜವಾಗಿರುತ್ತದೆ. ಜಗತ್ತಿನ ಪ್ರಮುಖ ಭಾಷೆಗಳಲ್ಲಿ ಕನ್ನಡ ಭಾಷೆಗೆ ಮಹತ್ವದ ಸ್ಥಾನವಿದೆ. ಕನ್ನಡದ ಚಿಂತನೆಗಳನ್ನು ಅವಲೋಕಿಸಿದರೆ ಕನ್ನಡ ಮನಸ್ಸುಗಳು ಉದಾತ್ತ ಚಿಂತನೆಗಳಿಂದ ಕೂಡಿರುವುದು ಗೋಚರವಾಗುತ್ತವೆ. ಕನ್ನಡ ಜನಪದರು ಕಟ್ಟಿದ ಸಾಹಿತ್ಯ ಮತ್ತು ಕಲಾ ಪ್ರಕಾರಗಳು ಇಂದಿಗೂ ಜನಮನದಲ್ಲಿ ಮಹತ್ವದ ಸ್ಥಾನ ಪಡೆದಿವೆ ಎಂದರು.
ಮಾತೃಭಾಷೆಯಲ್ಲಿ ಕಲಿಯುವವರಿಗೆ ತಮ್ಮ ಭಾವನೆಗಳನ್ನು ಪರಿಣಾಮಕಾರಿ ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕನ್ನಡದ ಪ್ರಮುಖ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.ಪುಸ್ತಕ ಪ್ರೀತಿ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದರು.
ಸಿರಿಗನ್ನಡ ಸಂಭ್ರಮ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿರುವ ಮತ್ತು ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಸರ್ಕಾರಿ ತೆಲುಗು ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣಕಿಶೋರಕುಮಾರ್, ಅಧ್ಯಾಪಕರಾದ ಹನುಮಂತರಾಯಪ್ಪ, ಹೇಮಲತಾ, ಪುಟ್ಟಗಂಗಮ್ಮ, ಮಂಜುನಾಥ, ರೂಪ, ಕಲಾವತಿ, ವೆಂಕಟರಮಣರೆಡ್ಡಿ, ಹಳೆಯ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳಾದ ಕೆ.ಶ್ರೀನಿವಾಸಲು, ಸುಬ್ಬರಾವ್, ಜಗದೀಶ್, ನಟರಾಜ್, ಉಪೇಂದ್ರ, ಲಕ್ಷ್ಮೀನಾರಾಯಣ, ಅಶೋಕ, ನಾರಾಯಣಸ್ವಾಮಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…