ಕನ್ನಡ ಭಾಷೆಯಲ್ಲಿ ವಾದ ಮಂಡನೆ, ತೀರ್ಪು ನೀಡಿದರೆ ಹೆಚ್ಚು ಪರಿಣಾಮಕಾರಿಗಿರಲಿದೆ- ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್

ನ್ಯಾಯಾಲಯಗಳಲ್ಲಿ ಮಾತೃಭಾಷೆಯಾದ ಕನ್ನಡ ಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ ನಗರದ ಕೋರ್ಟ್ ಆವರಣದಲ್ಲಿ ತಾಲೂಕು ವಕೀಲರ‌ ಸಂಘದ ವತಿಯಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಹಾಗೂ ವಕೀಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೊಡ್ಡಬಳ್ಳಾಪುರ ಒಂದು ಐತಿಹಾಸಿಕ ಹಿನ್ನೆಲೆ ಇರುವ ಸ್ಥಳವಾಗಿದ್ದು ವಕೀಲರ ಸಂಘದ ಈ ಕಾರ್ಯಕ್ರಮವು ಇತಿಹಾಸದ ಪುಟಗಳಲ್ಲಿ ಸೇರುತ್ತದೆ. ಕನ್ನಡಿಗರಾಗಿ ನಾವು ಕರ್ನಾಟಕದಲ್ಲಿ ಜನ್ಮ ಪಡೆದಿರುವುದು ನಮ್ಮ ಪುಣ್ಯ. ನ್ಯಾಯಾಲಯಗಳಲ್ಲಿ ಕನ್ನಡ ಭಾಷೆ ಬಳಕೆ ಇದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಬರೆಯುವ ಹಲವು ಜಡ್ಜ್ ಗಳಿಗೆ ಸನ್ಮಾನಿಸಿ ಗೌರವಿಸುವ ಅಭ್ಯಾಸ ತುಂಬಾ ಸಂತಸದ ವಿಷಯವಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗಿಂತ ದೊಡ್ಡಬಳ್ಳಾಪುರ ನ್ಯಾಯಾಲಯ ಸುಸಜ್ಜಿತವಾಗಿದೆ. ವಕೀಲರ‌ ಸಂಘಕ್ಕೆ ಹೊಸ ಕಟ್ಟಡದ ಅಗತ್ಯವಿದ್ದು, ಶೀಘ್ರವೇ ಹೊಸ ಕಟ್ಟಡ‌ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ನಂತರ ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ‌ ಮಾವಿನಕುಂಟೆ ಮಾತನಾಡಿ, ಈ ಕಾರ್ಯಕ್ರಮ ತುಂಬಾ ವಿಶೇಷವಾದದ್ದು, ಕಾರಣ, ವಕೀಲರ ದಿನಾಚರಣೆ ಜೊತೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ಎಲ್ಲರ ಸಹಕಾರದಿಂದ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಕನ್ನಡ ಭಾಷೆ ಜೇನಿನಂತೆ ಸವಿದಷ್ಟು ಸಿಹಿ. ಹೊರ ರಾಜ್ಯಗಳಿಂದ ಬಂದು ಜೀವನ ಕಟ್ಟಿಕೊಂಡಿರುವ  ಸಾವಿರಾರು ಕುಟುಂಬಗಳಿಗೆ ನಮ್ಮ ನಾಡಿನ ಸವಲತ್ತು ಬೇಕಿದೆ ಭಾಷೆ ಬೇಡವಾಗಿದೆ ಈ ನಡವಳಿಕೆ ಬದಲಾಗಬೇಕಿದೆ ಎಂದರು.

ಕೇವಲ ವಾಣಿಜ್ಯ ವಿಚಾರಕ್ಕಾಗಿ ಕನ್ನಡ ಭಾಷೆಯನ್ನು ತಾತ್ಸಾರ ಮಾಡುವ ನಮ್ಮ ನಾಡಿನ ವ್ಯಾಪಾರಸ್ಥರಿಗೆ ನಾಚಿಕೆಯಾಗಬೇಕು. ನಮ್ಮ ಮಾತೃಭಾಷೆಯನ್ನು ಬಿಟ್ಟು ಪರ ಭಾಷೆ ಬಳಸಲು ಮುಂದಾಗಿರುವ ವರ್ತನೆ ಕೂಡಲೇ ನಿಲ್ಲಬೇಕಿದೆ. ಮೊದಲು ಎಲ್ಲಾ ಕನ್ನಡಿಗರಲ್ಲಿ ನನ್ನ ನಾಡು ನನ್ನ ಭಾಷೆ ಎಂಬ ಭಾವನೆ ಮೂಡಬೇಕಿದೆ. ನಮ್ಮ ಅಸ್ತಿತ್ವ ನಮ್ಮ ಭಾಷೆ ನಮ್ಮ ಅಳಿವು ಉಳಿವು ನಮ್ಮ ನಾಡು ನುಡಿಯ ಅಭಿವೃದ್ಧಿಯಲ್ಲಿದೆ ಎಂಬುದು ನಮ್ಮ ಅರಿವಿಗೆ ಬರಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಕೀಲ ಪ್ರಭಾಕರ್ ರಾಜು ಸಂಪಾದಿಸಿರುವ ಕವನ ಸಂಕಲನ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ  ಎ.ಪಿ.ರಂಗನಾಥ್, ಶಿವಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ , ಪತ್ರಕರ್ತರಾದ ರವಿಕಿರಣ್, ನಟರು ವಾಗ್ಮಿಗಳು ಆದ ಮಹಾದೇವ್ , ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

19 minutes ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

3 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

4 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

15 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

18 hours ago