ಕನ್ನಡ ಭಾಷೆ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ- ಜೆಡಿಎಸ್ ಮುಖಂಡ ಹರೀಶ್ ಗೌಡ

ಕನ್ನಡದ ಭಾಷೆ ಸಂಸ್ಕೃತಿ ಉಳಿಸಲು ನಾವು ನಮ್ಮ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ. ಇದಕ್ಕೆ‌ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕವನ್ನು 1956ರಲ್ಲಿ ಏಕೀಕರಣಗೋಳಿಸಿ ಕನ್ನಡ ನಾಡುನುಡಿ ಉಳಿಯಲು ಹಲವಾರು ಕನ್ನಡ ಹೋರಾಟಗಾರರ ಮಾರ್ಗದರ್ಶದ ಫಲವಾಗಿ ಕರ್ನಾಟಕ ರಾಜ್ಯೊತ್ಸವ ಆಚರಣೆಗೆ ಕಾರಣವಾಗಿದೆ. ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ದೇಶದ ಎಲ್ಲ ರಾಜ್ಯದ ಜನರು ಹಾಗೂ ದೇಶ ವಿದೇಶದ ಜನರು ಬಂದು ವಾಸವಾಗಿದ್ದಾರೆ. ನಾವು ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ಕನ್ನಡ ಭಾಷೆಯನ್ನು ಭಾರತ ರಾಷ್ಟ್ರ ಭಾಷೆಯನ್ನಾಗಿ ಮಾಡುವುದು ಅತಿ ಅವಶ್ಯವಿದೆ ಹಾಗೂ ಎಲ್ಲ ಸಂಘಟನೆಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ  ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ  ಅಗ್ರ ಸ್ಥಾನ ಇರಲೇಬೇಕು.  ಪ್ರತಿಯೊಬ್ಬ ಕನ್ನಡಿಗರಲ್ಲೂ  ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ 5 ಕಿ.ಲೋ ಮೀಟರ್ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಭವನದ ಅಧ್ಯಕ್ಷ ಕೆ.ವೆಂಕಟೇಶ್. ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮುಖಂಡರಾದ ಕೆ.ಪಿ ಜಗನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *