ಕನ್ನಡದ ಭಾಷೆ ಸಂಸ್ಕೃತಿ ಉಳಿಸಲು ನಾವು ನಮ್ಮ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕರ್ನಾಟಕವನ್ನು 1956ರಲ್ಲಿ ಏಕೀಕರಣಗೋಳಿಸಿ ಕನ್ನಡ ನಾಡುನುಡಿ ಉಳಿಯಲು ಹಲವಾರು ಕನ್ನಡ ಹೋರಾಟಗಾರರ ಮಾರ್ಗದರ್ಶದ ಫಲವಾಗಿ ಕರ್ನಾಟಕ ರಾಜ್ಯೊತ್ಸವ ಆಚರಣೆಗೆ ಕಾರಣವಾಗಿದೆ. ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ದೇಶದ ಎಲ್ಲ ರಾಜ್ಯದ ಜನರು ಹಾಗೂ ದೇಶ ವಿದೇಶದ ಜನರು ಬಂದು ವಾಸವಾಗಿದ್ದಾರೆ. ನಾವು ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ. ಕನ್ನಡ ಭಾಷೆಯನ್ನು ಭಾರತ ರಾಷ್ಟ್ರ ಭಾಷೆಯನ್ನಾಗಿ ಮಾಡುವುದು ಅತಿ ಅವಶ್ಯವಿದೆ ಹಾಗೂ ಎಲ್ಲ ಸಂಘಟನೆಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.
ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಗ್ರ ಸ್ಥಾನ ಇರಲೇಬೇಕು. ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ 5 ಕಿ.ಲೋ ಮೀಟರ್ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಜಾಗೃತ ಭವನದ ಅಧ್ಯಕ್ಷ ಕೆ.ವೆಂಕಟೇಶ್. ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮುಖಂಡರಾದ ಕೆ.ಪಿ ಜಗನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…