ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ- ಜಿ.ಎಸ್.ಸ್ಮಿತಾ

ಭಾಷೆಯು ಸಾಂಸ್ಕೃತಿಕ ಪರಂಪರೆಯನ್ನು , ನಾಗರಿಕತೆಯ ಇತಿಹಾಸ, ಜ್ಞಾನ ಮತ್ತು ನಂಬಿಕೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ಜಿ.ಎಸ್.ಸ್ಮಿತಾ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ಸಪ್ತಾಹ ಸಮಾರೋಪ, ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮತ್ತು ಬೆಳವಣಿಗೆ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಭವ್ಯ ಪರಂಪರೆ ಇದೆ. ಭವ್ಯ ಪರಂಪರೆಯುಳ್ಳ ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬ ಕನ್ನಡಿಗರು ಪ್ರೀತಿ ಬೆಳೆಸಿಕೊಳ್ಳಬೇಕಾಗಿರುವುದು ಅತ್ಯಗತ್ಯ. ಕನ್ನಡ ಭಾಷೆಯೂ ಕನ್ನಡಿಗರ ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕವಾಗಿದೆ ಎಂದರು.

ಕನ್ನಡ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮ ಕುರಿತು ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ದೊಡ್ಡಬಳ್ಳಾಪುರ ವಿವಿಧ ಶಾಲಾ ಕಾಲೇಜುಗಳಲ್ಲಿ ಮೂವತ್ತು ವರ್ಷಗಳಿಂದ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ ಕಾರ್ಯಕ್ರಮಗಳು ನಡೆಯುತ್ತಾ ಬರುತ್ತಿದೆ. ಈ ವರ್ಷ ಕುವೆಂಪು ರಚಿಸಿರುವ ನಾಡಗೀತೆಗೆ ನೂರು ವರ್ಷ ಆಗಿರುವುದರಿಂದ ಶತಮಾನದ ಸಂಭ್ರಮವನ್ನು ದೊಡ್ಡಬಳ್ಳಾಪುರದಲ್ಲಿ ಆಚರಿಸಲಾಯಿತು. ಇದರ ಜೊತೆಗೆ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಹ ನಡೆಸಲಾಯಿತು. ಈ ಸ್ಪರ್ಧಾ ಪರೀಕ್ಷೆಯಲ್ಲಿ 523 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.

ಜವಾಹರ ನವೋದಯ ವಿದ್ಯಾಲಯ ಪ್ರಾಂಶುಪಾಲ ಟಿ.ಪಳನಿ ವೇಲು ಮಾತನಾಡಿ, ದೊಡ್ಡಬಳ್ಳಾಪುರ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಕನ್ನಡ ಸಪ್ತಾಹ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ. ದೊಡ್ಡಬಳ್ಳಾಪುರ ನವೋದಯ ವಿದ್ಯಾಲಯದ‌ ಆವರಣದಲ್ಲಿ ಕನ್ನಡ ಜ್ಞಾನಪೀಠ ಪುರಸ್ಕೃತರ ಪುತ್ಥಳಿಗಳನ್ನು ಅನಾವರಣ ಮಾಡುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ ಹೊಂದಿದೆ. ‌ ಕಳೆದ ವರ್ಷ 50 ಮಂದಿ ಕನ್ನಡ ನಾಡಿನ ಸಾಧಕರ ಮಾಹಿತಿಯನ್ನು ವಿದ್ಯಾರ್ಥಿಗಳು ಸಿದ್ದಪಡಿಸಿ ಪ್ರದರ್ಶನ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆ ಪಡೆದಿದ್ದರೂ ಎಂದರು.

ಸಮಾರಂಭದಲ್ಲಿ ಜವಾಹರ ನವೋದಯ ವಿದ್ಯಾಲಯ ಉಪಪ್ರಾಂಶುಪಾಲ ಜಯಕೃಷ್ಣನ್ ಮಂಗಟ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಅಧ್ಯಾಪಕರುಗಳಾದ ಜೆ.ಪಿ.ಉಪಾಧ್ಯೆ, ಆರ್.ವೀರಣ್ಣಗೌಡ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಹೋಬಳಿ ಘಟಕಗಳ ಪದಾಧಿಕಾರಿಗಳಾದ ಜಿ.ಸುರೇಶ್, ಅಂಜನಮೂರ್ತಿ, ಗಿರೀಶ್ ಬರಗೂರು, ಪ್ರತಿನಿಧಿಗಳಾದ ಅಣ್ಣಯ್ಯ, ವೆಂಕಟೇಶ್, ಶಿವಪ್ರಸಾದ್, ರಂಗಸ್ವಾಮಯ್ಯ, ಸಫೀರ್, ಜವಾಹರ ನವೋದಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡ ಸಪ್ತಾಹ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ದೊಡ್ಡಬಳ್ಳಾಪುರ ಜವಾಹರ ವಿದ್ಯಾಲಯ ವಿದ್ಯಾರ್ಥಿಗಳೊಂದಿಗೆ ಮಧ್ಯಪ್ರದೇಶ ಅಲೀರಾಜ್ ಜವಾಹರ ನವೋದಯದ ವಿದ್ಯಾರ್ಥಿಗಳು ನಡೆಸಿಕೊಟ್ಟ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

23 minutes ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

5 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

7 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

10 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

23 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago