ಕನ್ನಡ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆ ಕಾಪಾಡುವುದು ಪ್ರತಿಯೊಬ್ಬರ ಹೊಣೆ- ಕರ್ನಾಟಕದಲ್ಲಿ ನೆಲೆಸುವ ಅನ್ಯಭಾಷಿಕರು ಕನ್ನಡ ಭಾಷೆಗೆ ನಿಷ್ಠರಾಗಿರಬೇಕು- ಹಂಸಲೇಖ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಎಲ್ಲ ಭಾಷೆಗಳ ಜನರು ನೆಲೆಸಿದ್ದಾರೆ. ಆದರೆ ಬೇರೆ ಭಾಷೆಯವರು ಯಾರೇ ಆಗಿರಲಿ, ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡ ಭಾಷೆಗೆ ನಿಷ್ಠರಾಗಿರಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅಸ್ಮಿತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಖ್ಯಾತ ಚಿತ್ರಸಾಹಿತಿ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅಭಿಪ್ರಾಯಪಟ್ಟರು.

ನಗರದ ಆರ್.ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಆರ್‌ಎಲ್‌ಜೆಐಟಿ ಕನ್ನಡ ಹಬ್ಬ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಎಂದರೆ ಕೇವಲ ಭಾಷೆ ಅಥವಾ ಶಿಕ್ಷಣಕ್ಕೆ ಸೀಮಿತವಾದುದಲ್ಲ. ಅದೊಂದು ದೊಡ್ಡ ನಿವೇಶನದಂತೆ. ಅದರ ಹಕ್ಕುಪತ್ರ ಪಡೆಯಲು ಮೊದಲು ಕನ್ನಡ ಎಂಬ ಅರ್ಹತೆ ಇರಬೇಕು ಎಂದು ಮಾರ್ಮಿಕವಾಗಿ ನುಡಿದರು. ಕನ್ನಡದ ಅನ್ನದಲ್ಲಿ ಸೊಗಡಿದೆ, ಸ್ವಾಭಿಮಾನವಿದೆ, ಸ್ವಾದವಿದೆ. ಇಂತಹ ಶ್ರೀಮಂತ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಗುರಿ ಪ್ರತಿಯೊಬ್ಬರಲ್ಲೂ ಇರಬೇಕು ಎಂದರು.

ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಇಂದು ದೇಶದಲ್ಲೇ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿದೆ. ಕನ್ನಡಿಗರ ಮೃದು ಸ್ವಭಾವ ಮತ್ತು ಸಹಿಷ್ಣುತೆಯಿಂದಾಗಿ ವಿವಿಧ ಭಾಷೆ, ಸಂಸ್ಕೃತಿಗಳ ಜನರು ಇಲ್ಲಿ ನೆಲೆಸಿದ್ದಾರೆ. ಹೀಗಾಗಿ ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿ, ಅದರ ಉಳಿವಿಗೆ ಶ್ರಮಿಸುವುದು ಎಲ್ಲರ ಕರ್ತವ್ಯವಾಗಬೇಕು ಎಂದು ಹೇಳಿದರು.

ಮುತ್ಸದ್ದಿ ರಾಜಕಾರಣಿ ಆರ್.ಎಲ್. ಜಾಲಪ್ಪ ಅವರು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಮಾಡಿರುವುದು ಶ್ಲಾಘನೀಯ ಕಾರ್ಯ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದವರು. ತಾವು ಕೂಡ ಅವರ ಅಭಿಮಾನಿಯಾಗಿದ್ದು, ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಹೆಸರಿನ ಥೀಮ್ ಆಧರಿಸಿ ಹಾಡೊಂದನ್ನು ಸಂಯೋಜಿಸಿದ್ದೇನೆ. ಅದನ್ನು ಪೂರ್ಣಗೊಳಿಸಿ ನೀಡುವುದಾಗಿ ತಿಳಿಸಿದರು.

‘ಓ.ಕೆ’ ಚಿತ್ರದ ನಿರ್ದೇಶನ

ಸಂಗೀತ ನಿರ್ದೇಶಕನಾಗಿ ಹಾಗೂ ಸಾಹಿತಿಯಾಗಿ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದರೂ, ನಿರ್ದೇಶಕನಾಗಿ ತಾನು ಹೊಸಬ ಎಂದು ಹಂಸಲೇಖ ಹೇಳಿದರು. ಪ್ರಸ್ತುತ ‘ಓ.ಕೆ’ ಹೆಸರಿನ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಅದರ ಚಿತ್ರೀಕರಣ ಇದೇ ಕಾಲೇಜು ಆವರಣದಲ್ಲಿ ನಡೆಯುತ್ತಿದೆ. ಭ್ರೂಣಹತ್ಯೆಯಿಂದ ಹೆಣ್ಣುಮಕ್ಕಳ ಸಂತತಿ ಕಡಿಮೆಯಾಗುತ್ತಿರುವುದು ಹಾಗೂ ಮಹಿಳೆಯರ ಮೇಲಿನ ಶೋಷಣೆ ಹೆಚ್ಚುತ್ತಿರುವುದರ ವಿರುದ್ಧ ಧ್ವನಿ ಎತ್ತುವ ವಿಚಾರವನ್ನು ಚಿತ್ರದಲ್ಲಿ ಪ್ರಸ್ತುತಪಡಿಸಲಾಗಿದೆ. ಕನ್ನಡಿಗರು ಈ ಪ್ರಯತ್ನಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ, ಕನ್ನಡ ನಾಡು, ನುಡಿಗೆ ಗೌರವ ಮತ್ತು ಮನ್ನಣೆ ನೀಡುವುದು ಪ್ರತಿಯೊಬ್ಬರ ಹೊಣೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಹೊರರಾಜ್ಯಗಳ ವಿದ್ಯಾರ್ಥಿಗಳೂ ಶಿಕ್ಷಣ ಪಡೆಯುತ್ತಿದ್ದು, ಅವರು ಕನ್ನಡ ಕಲಿತು ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಶ್ರೀ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಜಿ. ಹನುಮಂತರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಪ್ರಣವ್ ಸತೀಶ್, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ತೇಜಸ್ವಿನಿ ಎನ್., ಸದಸ್ಯರಾದ ಜೆ.ಆರ್. ರಾಕೇಶ್, ಸಂಜಯ್ ರಾಜ್, ಎನ್. ಉತ್ತಮ್ ಕುಮಾರ್, ವಿದ್ವತ್, ತೇಜೇಶ್ವರ್ ಜಗದಾಳೆ, ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಮುರಳಿ, ವಿದ್ಯಾನಿಧಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿಗಳು ಹಂಸಲೇಖ ಅವರ ಸಾಹಿತ್ಯ ಮತ್ತು ಸಂಗೀತ ಸಂಯೋಜನೆಯ ಹಾಡುಗಳಿಗೆ ನೃತ್ಯ ಪ್ರದರ್ಶಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ಹಬ್ಬದ ಸಂಭ್ರಮ ಹೆಚ್ಚಿಸಿದವು.

ನಾಡದೇವಿ ಉತ್ಸವದ ಮೆರವಣಿಗೆ

ಕಾರ್ಯಕ್ರಮಕ್ಕೂ ಮುನ್ನ ನಗರದ ಮುತ್ಯಾಲಮ್ಮ ದೇವಾಲಯದ ಬಳಿಯಿಂದ ಭುವನೇಶ್ವರಿ ದೇವಿ ಹಾಗೂ ನಗರ ದೇವತೆ ಮುತ್ಯಾಲಮ್ಮನವರ ಭವ್ಯ ಮೆರವಣಿಗೆ ನಡೆಯಿತು. ನಂದಿಧ್ವಜ, ವೀರಗಾಸೆ, ಗಾರುಡಿಗೊಂಬೆ ಸೇರಿದಂತೆ ವಿವಿಧ ಕಲಾತಂಡಗಳು ಮತ್ತು ವಾದ್ಯಗೋಷ್ಠಿಗಳೊಂದಿಗೆ ಮೆರವಣಿಗೆ ಕಾಲೇಜು ಆವರಣದವರೆಗೆ ಸಾಗಿತು. ಮೆರವಣಿಗೆಯಲ್ಲಿ ಪ್ರದರ್ಶಿಸಿದ ಉದ್ದನೆಯ ಕನ್ನಡ ಧ್ವಜ ಸಾರ್ವಜನಿಕರ ಗಮನ ಸೆಳೆಯಿತು.

Ramesh Babu

Journalist

Recent Posts

ಬೆಲೆ ಏರಿಕೆ, ವಿದ್ಯುತ್ ಅಭಾವ, ಭೂಸ್ವಾಧೀನ ನೀತಿ ಖಂಡಿಸಿ ಜೆಡಿಎಸ್ ಪ್ರತಿಭಟನೆ: ಹಳ್ಳಿ ಗುಗ್ಗುಗಳ ಶಕ್ತಿ ಏನೆಂಬುದು ಸರ್ಕಾರಕ್ಕೆ ತೋರಿಸುತ್ತೇವೆ- ಹರೀಶ್ ಗೌಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ಅವ್ಯವಸ್ಥೆ…

1 hour ago

₹50 ಸಾವಿರ ಲಂಚ ಸ್ವೀಕರಿಸುವಾಗ ನಗರಸಭೆ ಆಯುಕ್ತ ಎಸಿಬಿ ಬಲೆಗೆ: ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ; ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಹಣ ಪತ್ತೆ

ನಿರ್ಮಲ್: ಗುತ್ತಿಗೆದಾರನಿಗೆ ಬಾಕಿ ಉಳಿದಿದ್ದ ಕಾಮಗಾರಿಗಳ ಹಣ ಬಿಡುಗಡೆ ಮಾಡಲು ₹50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಭೈಂಸಾ ನಗರಸಭೆಯ ಪ್ರಭಾರ…

13 hours ago

ಸರ್ಕಾರದ ನೀತಿಗಳ ವಿರುದ್ಧ ನಾಳೆ ಜೆಡಿಎಸ್ ಬೃಹತ್ ಪ್ರತಿಭಟನೆ: ಬಸ್ ಪ್ರಯಾಣ ದರ ಏರಿಕೆ, ವಿದ್ಯುತ್ ಸಮಸ್ಯೆ, ರೈತರ ನಿರ್ಲಕ್ಷ್ಯ ಖಂಡಿಸಿ ಹೋರಾಟ- ಹರೀಶ್ ಗೌಡ

ದೊಡ್ಡಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ವಿವಿಧ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಖಂಡಿಸಿ…

1 day ago

ರೈತ ಮಹಿಳೆಯರ ಸ್ವಾವಲಂಬನೆಗೆ ಕ್ಷೀರ ಸಂಜೀವಿನಿ ಆಸರೆ- ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತ ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಮೂಲ್ ನಿರ್ದೇಶಕ…

2 days ago

ಮೂರನೇ ಮದುವೆಗೂ ಗುಡ್‌ಬೈ ಹೇಳಿದ ಪವನ್ ಕಲ್ಯಾಣ್!

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಬದುಕಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪವನ್ ಕಲ್ಯಾಣ್ ಕೊನಿಡೆಲಾ…

2 days ago

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…

2 days ago