ನಮ್ಮ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು- ಶಾಂತಮ್ಮ ನಾಗರಾಜ್ ಹೇಳಿಕೆ

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆಯನ್ನು ನಮ್ಮ  ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕೆಂದು ಎಂದು ಮುಖ್ಯಶಿಕ್ಷಕಿ ಶಾಂತಮ್ಮನಾಗರಾಜ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ  ವಿದ್ಯಾರ್ಥಿನಿಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‌

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ‌ ಇತಿಹಾಸವಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ‌ಎಲ್ಲಾ ಕನ್ನಡಿಗರ ಮೇಲಿದೆ. ಕನ್ನಡ ಅಭಿಮಾನ ನವೆಂಬರ್ ತಿಂಗಳಿಗಷ್ಟೆ ಸೀಮಿತ‌ ಆಗಬಾರದು.‌ ವರ್ಷದ ಎಲ್ಲಾ ದಿನಗಳು ಕನ್ನಡ ನಿತ್ಯೋತ್ಸವ ಆಗಬೇಕಾಗಿದೆ ಎಂದರು.‌

ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ  ವಿದ್ಯಾರ್ಥಿನಿಲಯದ. ಮೇಲ್ವಿಚಾರಕ ಸಿ.ಅಣ್ಣಯ್ಯ  ಮಾತನಾಡಿ, ಕರ್ನಾಟಕ ರಾಜ್ಯ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಹೆಸರಾಗಿದೆ.‌ ಕನ್ನಡ ಭಾಷೆ, ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು.‌ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ದೊರೆಯಬೇಕು ಎಂದರು.

ದೊಡ್ಡಬಳ್ಳಾಪುರ ಕನ್ನಡ ಸಾಹಿತ್ಯ ‌ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಮಂಡ್ಯದಲ್ಲಿ ಡಿ.20, 21 ಮತ್ತು 22 ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗುವ ಪ್ರತಿನಿಧಿಗಳಿಗೆ  ಆನ್‌ಲೈನ್‌ನಲ್ಲಿ ನೋಂದಣಿಯಾಗುವ‌ ಅವಕಾಶವಿದೆ. ಪ್ರತಿನಿಧಿಯಾಗಿ ನೋಂದಣಿಯಾಗಿ ಭಾಗವಹಿಸಲು ₹600 ನಿಗದಿಯಾಗಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಕನ್ನಡ ಅಭಿಮಾನಿಗಳು ಹೆಚ್ಚಿನ ‌ಸಂಖ್ಯೆಯಲ್ಲಿ ಈ ಬಾರಿ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕನ್ನಡಪರ ಹೋರಾಟಗಾರ ರಾಮಾಂಜನೇಯ, ನವ್ಯಾಶ್ರೀ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ಪದಾಧಿಕಾರಿಗಳಾದ‌  ಭವ್ಯಾ, ಪುಷ್ಪಲತಾ , ಹಣಬೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹರೀಶ್, ವೆಂಕಟೇಶ್, ಕ್ರೀಡಾ ತರಬೇತುದಾರರಾದ ಶ್ರೀಕಾಂತ್,  ಹೇಮಂತ್, ವಿದ್ಯಾರ್ಥಿನಿಲಯದ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸನ್ಮಾನ: ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುವ ದೊಡ್ಡಬಳ್ಳಾಪುರ ನವ್ಯಾಶ್ರೀ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ಯೋಗಪಟುಗಳಾದ ಬಿ.ಎಂ.ಕೀರ್ತನಾ, ಎನ್.ಪುನೀತ್ ಕೊಂಗಾಡಿ,  ಬಿ.ಎಸ್.ಕೀರ್ತನಾ, ಪ್ರೌಢಶಾಲೆಯ ವಿಭಾಗದಲ್ಲಿ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾಗಿರುವ ಹಣಬೆ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಆಕಾಶ್ ಗಣಪತಿ ಕೋಳಿ, ಪರುಶರಾಮ್ ಗುರಿಕಾರ, ವಿನೋದ್ ಚಲವಾದಿ, ಜಾನು ರವಿ, ಎಸ್.ಪ್ರಜ್ವಲ್, ಶರಣಪ್ಪ ಮಾಲಿಕಾರ್, ಮಾರುತಿ ಮುದುಕಪ್ಪ‍ ಚಲವಾದಿ,   ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿ.ಅಣ್ಣಯ್ಯ, ಮಹಾದೇವಸ್ವಾಮಿ, ಶಶಿಕಾಂತ್, ಶಾರದಮ್ಮ, ಯಮುನಾವ್ವ ಖನ್ನಾಳ ಅವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *