ನವೆಂಬರ್ 01 ರಂದು ದೇವನಹಳ್ಳಿ ಟೌನ್ ನ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಎಲ್ಲರಿಗೂ ತಲುಪಿಸಿ ಎಂದು ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಗೆ ಸೂಚಿಸಿದರು. ವೇದಿಕೆ ಮತ್ತು ಧ್ವಜ ಕಟ್ಟೆ ಅಲಂಕಾರ, ಪಥ ಸಂಚಲನ, ವಿಡಿಯೋ ಮತ್ತು ಛಾಯಚಿತ್ರ, ಕನ್ನಡ ಸಾಹಿತ್ಯ ಪುಸ್ತಕ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಲಘು ಉಪಹಾರ, ನೀರಿನ ವ್ಯವಸ್ಥೆ, ಇತ್ಯಾದಿ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳು ಕೈಗೊಳ್ಳುವಂತೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಆಯ್ಕೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ವಿವಿಧ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಸ್ವ ವಿವರಗಳೊಂದಿಗೆ ಅಕ್ಟೋಬರ್ 25 ರಂದು ಸಂಜೆ 5 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಲು ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿ ಕುಮಾರ್ ಡಿ.ಎಂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…