ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರಿಗೆ 2025ನೇ ಸಾಲಿನ ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರಕ್ಕೆ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.
50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಮೈಸೂರು ವೀಣೆಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ವೀಣೆ ತಯಾರಿಕೆಯ ಪರಂಪರೆಯನ್ನು ಮುಂದುವರಿಸಲು ಹೊಸ ತಲೆಮಾರಿನ ಪ್ರತಿಭೆಗಳು ಈ ಕರಕುಶಲತೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿವೆ.
ಸಿಂಪಾಡಿಪುರ ಗ್ರಾಮದಲ್ಲಿತ ಯಾರಾಗುವ ವೀಣೆಗಳು ಹೆಸರಾಂತ ಸಂಗೀತ ಕಲಾವಿದರ ಕೈಯಲ್ಲಿವೆ. ಸಾಮಾನ್ಯವಾಗಿ ವೀಣೆಗಳು ಸಿದ್ಧಗೊಳ್ಳುವುದು ತಮಿಳುನಾಡಿನ ತಂಜಾವೂರಿನಲ್ಲಿ, ನಂತರ ವೀಣೆ ತಯಾರಿಕೆಯಲ್ಲಿ ಗಮನ ಸೆಳೆದಿರುವುದು ಬೆಂಗಳೂರು ಬಳಿಯ ಸಿಂಪಾಡಿಪುರ ಗ್ರಾಮ. ಕಳೆದ ಐವತ್ತು ವರ್ಷಗಳಿಂದ, ಈ ಊರಿನಲ್ಲಿ ವೀಣೆ ಮತ್ತು ತಂಬೂರಿಗಳನ್ನು ತಯಾರು ಮಾಡುತ್ತಿದ್ದಾರೆ.
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…